

ಕೆ.ಆರ್.ನಗರ: ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಅಂಗವಾಗಿ ಇಲ್ಲಿನ ಗ್ರಂಥಾಲಯ ಆವರಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ ಸಹಯೋಗದಲ್ಲಿ ನ.14 ರಿಂದ 20 ರವರೆಗೆ ಪುಸ್ತಕ ಪ್ರದರ್ಶನ, ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಗಳು ನಡೆಯಿತು.
ಗ್ರಂಥಾಲಯ ಸದಸ್ಯತ್ವ ಅಭಿಯಾನ ನಡೆಸುವ ಮೂಲಕ ಓದುಗರಿಗೆ ಗ್ರಂಥಾಲಯ ಸದಸ್ಯತ್ವ ನೀಡಲಾಯಿತಲ್ಲದೆ, ಡಾ.ಎಸ್.ಆರ್.ರಂಗನಾಥನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.
ಗ್ರಂಥಪಾಲಕಿ ಎಂ.ವಾಣಿ ಮಾತನಾಡಿ, ವಿಶ್ವದ ಅತ್ಯಂತ ಶ್ರೇಷ್ಠ ವ್ಯಕ್ತಿಗಳು ಹೆಚ್ಚಿನ ಸಮಯವನ್ನು ಗ್ರಂಥಾಲಯದಲ್ಲಿ ಕಳೆದಿದ್ದಾರೆ. ಇದರಿಂದ ಸಾರ್ವಜನಿಕ ಗ್ರಂಥಾಲಯದ ಅವಶ್ಯಕತೆ ಎಷ್ಟು ಇದೆ ಎಂಬುದು ತಿಳಿಯಲಿದೆ ಎಂದರು.
ಓದುಗರು ಹಾಗು ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳು ಅಭಿಪ್ರಾಯ ವ್ಯಕ್ತಪಡಿಸಿದರು.