ಅನಕ್ಷರಸ್ಥರನ್ನು ಸಾಕ್ಷರಸ್ಥರನ್ನಾಗಿಸುವ ಕೆಲಸ ಆಗಬೇಕಿದೆ: ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ. ಕಾವೇರಿ ಹೇಳಿಕೆ

Literacy Day
Published on

ಬೆಂಗಳೂರು: ಶಿಕ್ಷಣ ಇಲಾಖೆ ವತಿಯಿಂದ ಹಲವು ಯಶಸ್ವಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಮಾಡಿಕೊಂಡು ಬರುತ್ತಿದ್ದರೂ, ಅನಕ್ಷರಸ್ಥರು ಇಂದಿಗೂ ರಾಜ್ಯದಲ್ಲಿ ಇರುವುದು ವಿಷಾದನೀಯ ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ. ಕಾವೇರಿ ಬೇಸರ ವ್ಯಕ್ತಪಡಿಸಿದರು.

ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ಸಂದರ್ಭದಲ್ಲಿ ಸಾರತಾ ಭಿತ್ತಿ ಪತ್ರ, ಸಾರತಾ ಕಾರ್ಯಕ್ರಮಗಳ ಮಾಹಿತಿಯುಳ್ಳ ಕಿರು ಹೊತ್ತಿಗೆ, ಕರಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಅನಕ್ಷರಸ್ಥರನ್ನು ಸಾಕ್ಷರಸ್ಥರನ್ನಾಗಿ ಮಾಡುವುದು ಇಲಾಖೆಯ ಪ್ರತಿಯೊಬ್ಬ ಅಧಿಕಾರಿಯ ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಎಲ್ಲರೂ ಹೆಚ್ಚಿನ ಶ್ರಮ ವಹಿಸಿ ಪ್ರಯತ್ನಿಸಬೇಕಾಗಿದೆ ಎಂದು ಹೇಳಿದರು.

ಡಿಎಸ್​ಇಆರ್​ಟಿ ಕಛೇರಿಯಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ಸಾರ ಧ್ವಜಾರೋಹಣವನ್ನು ನಿರ್ದೇಶಕಿ ವಿ.ಸುಮಂಗಲ ನೆರವೇರಿಸಿ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಇಲಾಖೆಯ ಜಂಟಿ ನಿರ್ದೇಶಕರು, ಉಪನಿರ್ದೇಶಕರು, ಅಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net