ರಾಷ್ಟ್ರೀಯ ಲೋಕ ಅದಾಲತ್ 12ರಂದು

02-LNG-02
ಲಿಂಗಸುಗೂರು ನ್ಯಾಯಾಲಯ ಸಂಕೀರ್ಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್ ಪೂರ್ವಭಾವಿ ಸಭೆಯಲ್ಲಿ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ ಮಾತನಾಡಿದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ, ಕ್ಷೇತ್ರ ಶಿಕ್ಷಣಾಧಿಕಾರಿ ಹುಂಬಣ್ಣ ರಾಠೋಡ, ಲಿಂಗಸುಗೂರು ವಕೀಲರ ಸಂಘದ ಕಾರ್ಯದರ್ಶಿ ಬಾಲರಾಜ ಸಾಗರ, ಪಿಎಸ್‌ಐ ರತ್ನಮ್ಮ, ಮುದಗಲ್ ಪುರಸಭೆ ಅಧಿಕಾರಿ ಆರೀಫ್ ಉನ್ನಿಸಾ ಬೇಗಂ, ಬಸ್ ಡಿಪೋ ಮೇಲ್ವಿಚಾರಕ ಮಾರುದ್ರಪ್ಪ, ಎಸಿಡಿಪಿಒ ರಾಜೇಶ್ವರಿ, ಕಂದಾಯ ನಿರೀಕ್ಷಕಿ ಸುಜಾತಾ, ಸಾಂಖಿಕ ನಿರೀಕ್ಷಕ ಮಹೇಶ, ಪ್ರಮುಖರಾದ ನಾಗರಾಜ ಗಸ್ತಿ, ಧರ್ಮಪ್ಪ ಹಟ್ಟಿ ಇದ್ದರು.
Published on

ಲಿಂಗಸುಗೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ತಾಲೂಕು ಕಾನೂನು ಸೇವಾ ಸಮಿತಿಯಿಂದ ಜು.12ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ ತಿಳಿಸಿದರು.

ಪಟ್ಟಣದ ನ್ಯಾಯಾಲಯದ ಸಂಕೀರ್ಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್ ಪೂರ್ವಭಾವಿ ಸಭೆಯಲ್ಲಿ ಮಂಗಳವಾರ ಮಾತನಾಡಿದರು. ರಾಜಿಸಂಧಾನದ ಮೂಲಕ ಯಾವುದೇ ನ್ಯಾಯಾಲಯದ ಶುಲ್ಕವಿಲ್ಲದೆ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಬೃಹತ್ ವೇದಿಕೆಯಾಗಿದೆ. ವಕೀಲರು ಲೋಕ ಅದಾಲತ್‌ನಲ್ಲಿ ಬರುವ ಸಣ್ಣ ಪುಟ್ಟ ಪ್ರಕರಣಗಳನ್ನು ರಾಜಿ ಮಾಡಿಸಿ ಇತ್ಯರ್ಥ ಪಡಿಸಲು ಮುಂದಾಗಬೇಕೆಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಅಂಬಣ್ಣ.ಕೆ ಮಾತನಾಡಿ, ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪ್ರಕರಣಗಳು ಹೆಚ್ಚು ಕಾಲಾವಕಾಶ ತೆಗೆದುಕೊಳ್ಳದೆ ಇತ್ಯರ್ಥ ಪಡಿಸಿಕೊಳ್ಳಬಹುದು. ವಕೀಲರ ಮೂಲಕವಾಗಲಿ ಹಾಗೂ ವೈಯಕ್ತಿಕವಾಗಲಿ ಬಗೆಹರಿಸಿಕೊಳ್ಳಬಹುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net