Lok Adalat 5 ಸಾವಿರಕ್ಕೂ ಅಧಿಕ ಪ್ರಕರಣ ರಾಜೀ ಸಂಧಾನದ ಮೂಲಕ ಇತ್ಯರ್ಥ ಮಾಡುವ ಗುರಿ

Lok Adalat Divyashree-CM
Published on

ಕಾರವಾರ: ಜಿಲ್ಲೆಯ 30 ಕ್ಕೂ ಅದಿಕ ನ್ಯಾಯಾಲಯಗಳಲ್ಲಿ ಡಿಸೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ (Lok Adalat) ಆಯೋಜಿಸಲಾಗಿದ್ದು, ನ್ಯಾಯಾಲಯಗಳಲ್ಲಿರುವ 5 ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ಇತ್ಯರ್ಥ ಮಾಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ. ಹೇಳಿದರು. ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ 33,663 ವಿಚಾರಣೆಯ ಹಂತದಲ್ಲಿವೆ. ಕಳೆದ ಬಾರಿ ನಡೆದ ಲೋಕ ಅದಾಲತ್‌ನಲ್ಲಿ 4,083 ಪ್ರಕರಣಗಳನ್ನು ರಾಜಿ ಸಂಧಾನ ಮಾಡಿಸಲಾಗಿತ್ತು. ಈ ಬಾರಿ 5 ಸಾವಿರಕ್ಕೂ ಅಽಕ ಪ್ರಕರಣಗಳನ್ನು ಲೋಕ ಅದಾಲತ್ ಮೂಲಕ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದರು.

Lok Adalat ಯಾವ್ಯಾವ ಪ್ರಕರಣಗಳು..?

ಬ್ಯಾಂಕ್ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧ ಪ್ರಕರಣಗಳು, ವಿದ್ಯುತ್, ಆಸ್ತಿ ಕರ ಹಾಗೂ ನೀರಿನ ಶುಲ್ಕಕ್ಕೆ ಸಂಬಂದಿಸಿದ ಪ್ರಕರಣಗಳು, ಕಾರ್ಮಿಕ ವಿವಾದಗಳು, ಭೂ ಸ್ವಾಧೀನ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ,ಕೌಟುಂಬಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಇತರೆ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ತಪಡಿಸಿಕೊಳ್ಳಬಹುದಾಗಿದೆ. ಅಲ್ಲದೇ ವ್ಯಾಜ್ಯ ಪೂರ್ವ ಪ್ರಕರಣಗಳನ್ನೂ ಇತ್ಯರ್ಥ ಮಾಡಬಹುದಾಗಿದ್ದು, ಸಾರ್ವಜನಿಕರು ತಮ್ಮ ವಕೀಲರ ಮೂಲಕ ಅಥವಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದರು. ವಕೀಲರ ಸಂಘದ ಅಧ್ಯಕ್ಷ ಕೆ.ಬಿ. ನಾಯಕ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net