ಜು.12ರಂದು ರಾಷ್ಟ್ರೀಯ ಲೋಕ ಅದಾಲತ್​

13manju3
Published on

ಬೆಳಗಾವಿ: ಕೌಟುಂಬಿಕ ನ್ಯಾಯಾಲಯದಲ್ಲಿನ ಪ್ರಕರಣಗಳು ಸೇರಿದಂತೆ ರಾಜಿಯಾಗಬಹುದಾದ ವಿವಿಧ ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್​ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆಗಿರುವ ಹಿರಿಯ ಸಿವಿಲ್​ ನ್ಯಾಯಾಧೀಶ ಸಂದೀಪ ಪಾಟೀಲ ತಿಳಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ವರ್ಷ ಮಾರ್ಚ್​ನಲ್ಲಿ ಲೋಕ್​ ಅದಾಲತ್​ ನಡೆಸಲಾಗಿತ್ತು. ಆಗ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ 15,505 ಪ್ರಕರಣ ಇತ್ಯರ್ಥಪಡಿಸಲಾಗಿತ್ತು. ಸದ್ಯ ಜಿಲ್ಲೆಯ ನ್ಯಾಯಾಲಯಗಳಲ್ಲಿ 1.37 ಲ ಪ್ರಕರಣಗಳು ಇತ್ಯರ್ಥವಾಗದೇ ಬಾಕಿ ಉಳಿದಿವೆ. ಈ ಪೈಕಿ ಅದಾಲತ್​ನಲ್ಲಿ ರಾಜಿ ಸಂಧಾನದ ಮೂಲಕ ಬಗೆಹರಿಸಲು 12 ಸಾವಿರ ಪ್ರಕರಣ ಗುರುತಿಸಿದ್ದೇವೆ. ಅದಾಲತ್​ಗೆ ಇನ್ನೂ ಒಂದು ತಿಂಗಳು ಕಾಲಾವಕಾಶವಿದ್ದು, ಇನ್ನಷ್ಟು ಪ್ರಕರಣ ಗುರುತಿಸಿ ಇತ್ಯರ್ಥಪಡಿಸಲು ಪ್ರಯತ್ನಿಸುತ್ತೇವೆ ಎಂದು ತಿಳಿಸಿದರು.

ಸಿವಿಲ್​ ವ್ಯಾಜ್ಯ, ಕಾರ್ಮಿಕ ವ್ಯಾಜ್ಯ, ಬ್ಯಾಂಕ್​ಗಳ ಸಾಲ ಪ್ರಕರಣ, ಕ್ರಿಮಿನಲ್​ ಪ್ರಕರಣ, ಕೌಟುಂಬಿಕ ನ್ಯಾಯಾಲಯದಲ್ಲಿನ ಪ್ರಕರಣಗಳು ಸೇರಿದಂತೆ ರಾಜಿಯಾಗಬಹುದಾದ ವಿವಿಧ ಪ್ರಕರಣಗಳನ್ನು ಇದರಲ್ಲಿ ಇತ್ಯರ್ಥಪಡಿಸಲು ಅವಕಾಶವಿದೆ. ಕದಾರರ ಮಧ್ಯೆ ಇರುವ ಭಿನ್ನಾಭಿಪ್ರಾಯ ಹೋಗಲಾಡಿಸಿ, ತ್ವರಿತವಾಗಿ ಪ್ರಕರಣ ಬಗೆಹರಿಸುವುದೇ ಇದರ ಉದ್ದೇಶವೂ ಆಗಿದೆ ಎಂದರು.

ಬೆಳಗಾವಿಯಲ್ಲಿ ಕಾಯಂ ಲೋಕ ಅದಾಲತ್​ ಕೂಡ ಇದೆ. ಕದಾರರು ಅದರಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯ ಇತ್ಯರ್ಥಪಡಿಸಿಕೊಳ್ಳಬಹುದು. ಜನರಲ್ಲಿ ಕಾನೂನುಗಳ ಬಗ್ಗೆ ತಿಳಿವಳಿಕೆ ಮೂಡಿಸಲು ವಿವಿಧ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದೇವೆ. ಪರಿಸರ ಸಂರಣೆ ಅಭಿಯಾನವನ್ನೂ ನಡೆಸುತ್ತಿದ್ದೇವೆ. ಸಾರ್ವಜನಿಕರು ಪ್ರಾಧಿಕಾರದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೋರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net