ಲೋಕ ಅದಾಲತ್‌ನಲ್ಲಿ 59,192 ಪ್ರಕರಣ ಇತ್ಯರ್ಥ

Kolara 11
Published on

ಕೋಲಾರ: ಜಿಲ್ಲೆಯ ಎಲ್ಲ ತಾಲೂಕು ಹಾಗೂ ಕಾನೂನು ಸೇವಾ ಸಮಿತಿಗಳ ಆಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 59,192 ಪ್ರಕರಣಗಳು ಇತ್ಯರ್ಥಗೊಂಡಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ.ಎ.ಮಂಜುನಾಥ್ ತಿಳಿಸಿದರು.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲೆಯ ಎಲ್ಲ ತಾಲೂಕು ಕಾನೂನು ಸೇವಾ ಸಮಿತಿಗಳ ಆಶ್ರಯದಲ್ಲಿ ಜಿಲ್ಲಾದ್ಯಂತ ಎಲ್ಲ ಪೀಠಗಳಲ್ಲಿ 49,079 ವ್ಯಾಜ್ಯ ಪೂರ್ವ ಪ್ರಕರಣಗಳು ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 10,113 ಪ್ರಕರಣಗಳನ್ನು ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಇತ್ಯರ್ಥ ವಾಡಲಾಗಿದೆ. ಸಾಲ ಮರುಪಾವತಿ, ಪರಿಹಾರ, ದಂಡ ಹಾಗೂ ಇತ್ಯಾದಿ ಹಣಕಾಸಿನ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಒಟ್ಟು 38,17,07,090 ಹಣ ಸಂಗ್ರಹ ಮತ್ತು ಪಾವತಿಯಾಗಿದೆ ಎಂದು ವಾಹಿತಿ ನೀಡಿದರು.

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಹೆಚ್ಚಿನ ಪ್ರಕರಣಗಳು ರಾಜಿಯಾಗಲು ಸಹಕರಿಸಿದ ಜಿಲ್ಲೆಯ ಎಲ್ಲ ನ್ಯಾಯಾಧೀಶರು, ವಕೀಲರು, ಸರ್ಕಾರಿ ಅಭಿಯೋಜಕರು, ಪೊಲೀಸ್ ಇಲಾಖೆ, ಜಿಲ್ಲಾ ಗ್ರಾಹಕರ ವೇದಿಕೆ, ಕಾರ್ಮಿಕ ಇಲಾಖೆ, ನಗರಸಭೆ ಆಯುಕ್ತರು, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು, ಇತರೆ ಇಲಾಖೆಗಳ ಅಧಿಕಾರಿಗಳು, ನ್ಯಾಯಾಲಯದ ಸಿಬ್ಬಂದಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಿಬ್ಬಂದಿ, ಕಕ್ಷಿದಾರರು, ವಾಧ್ಯಮ ಪ್ರತಿನಿಧಿಗಳು ಹಾಗೂ ನಗರಸಭೆಯ ಆಯುಕ್ತರಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ್ ಎಸ್.ಹೊಸಮನಿ ಕೃತಜ್ಞತೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net