ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್​ಶಿಪ್

Winners on National Karate Championship.
Published on


ಸಿದ್ದಾಪುರ: ಸಿದ್ದಾಪುರ ಹಾಗೂ ಶಿರಸಿ ಕರಾಟೆ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಇತ್ತೀಚೆಗೆ ಗಂಗಾವತಿಯಲ್ಲಿ ಏರ್ಪಡಿಸಿದ್ದ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್​ಶಿಪ್​ನಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಕಾರ್ತಿಕ್ ಮತ್ತು ಜೇಂಕಾರ್ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿ ತೃತೀಯ, ಆಶಿತಾ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿ ಪ್ರಥಮ, ಹರ್ಷಿತ್ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿ ದ್ವಿತೀಯ.

ಶಿರಸಿಯ ಹುಲಿಯಪ್ಪ ದೇವಸ್ಥಾನದ ಕರಾಟೆ ತರಬೇತಿ ಕೇಂದ್ರದ ವಿದ್ಯಾರ್ಥಿನಿ ಸಾಧನಾ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿ ಪ್ರಥಮ, ವಿವೇಕಾನಂದ ನಗರದ ವರಸಿದ್ಧಿ ವಿನಾಯಕ ದೇವಸ್ಥಾನದ ಕರಾಟೆ ತರಬೇತಿ ಕೇಂದ್ರದ ಮೃದಲಾ ಕಟಾ ಹಾಗೂ ಕುಮಿಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಸಿದ್ದಾಪುರ ಹಾಗೂ ಶಿರಸಿ ಕರಾಟೆ ತರಬೇತಿ ಕೇಂದ್ರದ ತರಬೇತುದಾರ ಆನಂದ ಕೃಷ್ಣ ನಾಯ್ಕ ಸಿದ್ದಾಪುರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net