ವಿಜ್ಞಾನದ ಗುಣಾತ್ಮಕ ವಿಚಾರಗಳಿಂದ ಬದುಕು ಸುಂದರ : ಡಾ. ಚಂದ್ರಶೇಖರ ದಾಮ್ಲೆ ಅನಿಸಿಕೆ

1
Published on

ಸುಳ್ಯ: ವಿಜ್ಞಾನದ ಗುಣಾತ್ಮಕ ವಿಚಾರಗಳನ್ನು ತಿಳಿದುಕೊಂಡು ಅದನ್ನು ಬಳಸುವ ಬಗ್ಗೆ ಎಚ್ಚರಿಕೆ ವಹಿಸಿ ಬದುಕನ್ನು ಸುಂದರವಾಗಿಸೋಣ ಎಂದು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ ಹೇಳಿದರು. ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಂಸ್ಥೆಯ ಮುಖ್ಯಶಿಕ್ಷಕಿ ಜಯಲಕ್ಷ್ಮೀ ದಾಮ್ಲೆ ಮಾತನಾಡಿ, ನಮ್ಮ ದೈನಂದಿನ ಜೀವನದಲ್ಲಿ ವಿಜ್ಞಾನ ಹಾಸು ಹೊಕ್ಕಾಗಿದ್ದು ಜನರು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ವೈಜ್ಞಾನಿಕ ಹಾಗೂ ವೈಚಾರಿಕ ಚಿಂತನೆ ಮೂಡಿಸಿಕೊಂಡರೆ ಯಶಸ್ಸನ್ನು ಸಾಧಿಸಬಹುದು ಎಂದರು.

ವಿಜ್ಞಾನ ಶಿಕ್ಷಕಿ ಪ್ರತಿಮಕುಮಾರಿ ಕೆ. ಸ್.ವಿಜ್ಞಾನ ದಿನದ ಪ್ರತಿಜ್ಞಾ ವಿಧಿ ಬೋಧಿಸಿದರು. ಶಿಕ್ಷಕಿ ಗಾಯತ್ರಿ ಬಿ.ಎಸ್ ಕಾರ್ಯಕ್ರಮದಲ್ಲಿ ಶುಭ ಹಾರೈಸಿದರು. ವಿದ್ಯಾರ್ಥಿ ಗ್ರಹಿತ್ ಡಿ.ಎಸ್.ಸ್ವಾಗತಿಸಿದರು. ಕಾರ್ತಿಕ್ ಎನ್. ಎನ್.ವಂದಿಸಿದರು. ಅಪ್ರಮೇಯ ಆರ್.ಯು ನಿರೂಪಿಸಿದರು. ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net