ಇಂಪಲ್ಸ್ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Impuls new
Published on

ಹುಬ್ಬಳ್ಳಿ : ವಿದ್ಯಾರ್ಥಿಗಳು ವಿಜ್ಞಾನಿಗಳ ಜೀವನ ಅವಲೋಕನ ಮಾಡುವುದರೊಂದಿಗೆ ಅವರು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸದಾ ಸ್ಮರಿಸಬೇಕು ಎಂದು ಶೈಕ್ಷಣಿಕ ನಿರ್ದೇಶಕ ಪ್ರೊ. ಎಸ್. ಬಿ. ಹಿರೇಮಠ ಇಲ್ಲಿ ಹೇಳಿದರು.

ಇಲ್ಲಿನ ವಿದ್ಯಾನಗರದ ಶಿರೂರ ಪಾರ್ಕ್ ಬಳಿಯ ಇಂಪಲ್ಸ್ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲತೆಯನ್ನು ರೂಢಿಸಿಕೊಂಡು ಜೀವನದಲ್ಲಿ ಯಶಸ್ವಿಯಾಗಬೇಕು ಎಂದು ಸಲಹೆ ನೀಡಿದರು.

ನಿವೃತ್ತ ಗ್ರಂಥಪಾಲಕ ಡಾ. ಬಿ. ಎಸ್. ಮಾಳವಾಡ ಮಾತನಾಡಿ, ವಿಜ್ಞಾನವು ಜನಸಾಮಾನ್ಯರ ಅಜ್ಞಾನ ದೂರವಾಗಿಸುತ್ತದೆ. ವಿಜ್ಞಾನಿಗಳು ಸತತ ಪರಿಶ್ರಮ ತಾಳ್ಮೆಗಳಿಂದ ಸಂಶೋಧನೆಗಳನ್ನು ಕೈಗೊಂಡು ಸಮಾಜಕ್ಕೆ ಉಪಯುಕ್ತ ಸೇವೆಗಳನ್ನು ಸಲ್ಲಿಸಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ಬಸವರಾಜ ಚಿನಿವಾಲರ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನಿಗಳ ಜೀವನಶೈಲಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ವಿಕಸಿತ ಭಾರತಕ್ಕೆ ದೇಶಿಯ ತಂತ್ರಜ್ಞಾನ ಬಳಕೆ ಪ್ರಸ್ತುತ ವರ್ಷದ ಘೊಷವಾಕ್ಯದ ಕುರಿತು ವಿವರಿಸಿದರು. ಕಳೆದ 7 ವರ್ಷಗಳಿಂದ ಮಹಾವಿದ್ಯಾಲಯ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ಮತ್ತು ಸೇವೆಯನ್ನು ನೀಡುತ್ತಿದೆ ಎಂದರು.

ಸಿಬ್ಬಂದಿ ಐಶ್ವರ್ಯ ಪಿ., ಆರ್. ಡಿ. ಶೇಖ, ರೋಹಿಣಿ ವಿಜಾಪೂರ, ಎಂ. ಆರ್. ಶಿಲ್ಪಾ, ಪೂಜಾ ಬಿ. ಹಾಗೂ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net