ಮಕ್ಕಳಲ್ಲಿ ಸೇವಾ ಮನೋಭಾವ ಮೂಡಲಿ

Manjunath-HSK-01
ದೊಡ್ಡಹುಲ್ಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಿಡ ನೆಡಲಾಯಿತು. ಮುಖ್ಯಶಿಕ್ಷಕ ಪ್ರಸಾದ್, ಪ್ರಾಧ್ಯಾಪಕರಾದ ಅಶ್ವತ್ಥ್ ನಾರಾಯಣ್, ಡಾ.ಈರಣ್ಣ, ಕಾರ್ಯಕ್ರಮಾಧಿಕಾರಿಗಳಾದ ರಾಜೇಶ್ವರಿ, ಸಿ.ವೀರಭದ್ರ, ಸಹ ಶಿಬಿರ ಅಧಿಕಾರಿಗಳಾದ ಹರೀಶ್, ಅನುಶ್ರೀ ಇದ್ದರು.
Published on

ವಿಜಯವಾಣಿ ಸುದ್ದಿಜಾಲ ಹೊಸಕೋಟೆ
ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಮಕ್ಕಳಲ್ಲಿ ಸೇವಾ ಮನೋಭಾವ ಮೂಡಿಸುವುದರ ಜತೆಗೆ ನಾಯಕತ್ವ ಗುಣ ಬೆಳೆಸುತ್ತದೆ ಎಂದು ಹೊಸಕೋಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಮುನಿನಾರಾಯಣಪ್ಪ ತಿಳಿಸಿದರು.
ಕಸಬಾ ಹೋಬಳಿಯ ದೊಡ್ಡಹುಲ್ಲೂರಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಸಮಾರೋಪದಲ್ಲಿ ಮಾತನಾಡಿದರು. ಮುಖ್ಯಶಿಕ್ಷಕಿ ವಿಜಯಲಕ್ಷ್ಮೀ ಮಾತನಾಡಿ, ವಿದ್ಯಾರ್ಥಿಗಳು ಶಾಲಾ ಆವರಣದ ಸ್ವಚ್ಛತೆ, ನೀರಿನ ಟ್ಯಾಂಕ್ ಸ್ವಚ್ಛತೆ, ಶಾಲಾ ಆವರಣದಲ್ಲಿ ಗಿಡ ನೆಡುವುದು, ವೈದ್ಯರಿಂದ ಶಾಲಾ ಮಕ್ಕಳ ಆರೋಗ್ಯ ತಪಾಸಣೆ, ಪರಿಸರ ಹಾಗೂ ಆರೋಗ್ಯದ ಬಗ್ಗೆ ಅರಿವು ಕಾರ್ಯಕ್ರಮ ಹಾಗೂ ಸಂಜೆ ಸಮಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸುವ ಕಾರ್ಯಕ್ರಮ ಅದ್ದೂರಿಯಾಗಿ ಮೂಡಿಬಂದಿದೆ ಎಂದರು.

ಪ್ರಾಥಮಿಕ ಹಂತದಲ್ಲೇ ಶಾಲಾ ಮಕ್ಕಳಿಗೆ ಸಂಸ್ಕಾರ, ನಡತೆ, ಶಿಸ್ತು, ಪರಿಸರ ಕಾಳಜಿ, ಆರೋಗ್ಯವಂತ ಜೀವನ ಶೈಲಿಯನ್ನು ಮೈಗೂಡಿಸಿಕೊಳ್ಳಲು ಪಾಲಕರ ಜತೆ ಶಿಕ್ಷಕರು ಹೆಚ್ಚು ಗಮನ ನೀಡಬೇಕು. ಇದರಿಂದ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕಾರಿ.
ರಾಜಗೋಪಾಲ್, ಎಸ್‌ಡಿಎಂಸಿ ಅಧ್ಯಕ್ಷ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net