ಫೆ.13 ರವರೆಗೆ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ

3111
Published on

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಫೆ.೧೩ ರವರೆಗೆ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನವನ್ನು ಕೈಗೊಳ್ಳಲಾಗಿದೆ.

ಕುಷ್ಠರೋಗವನ್ನು ಸುಲಭವಾಗಿ ಪತ್ತೆ ಹಚ್ಚಬಹುದು, ಹಾಗೆಯೇ ಗುಣಪಡಿಸಬಹುದಾಗಿದೆ. ಆದರೆ, ಕಾಯಿಲೆಗೆ ಪ್ರಾರಂಭದಲ್ಲಿಯೇ ಚಿಕಿತ್ಸೆ ಪಡೆಯಬೇಕು. ಇದಕ್ಕೆ ಪ್ರಕರಣಗಳನ್ನು ಪತ್ತೆ ಹಚ್ಚಲು ಸಮೀಕ್ಷೆ ಕೈಗೊಳ್ಳಲಾಗುತ್ತಿದೆ.

ಕೈ ಕಾಲುಗಳಲ್ಲಿ ನಿಶ್ಯಕ್ತಿ, ಬೆರಳುಗಳಲ್ಲಿ ಜೋಮು ಹಿಡಿಯುವುದು, ಕಣ್ಣು ಮುಚ್ಚುವಲ್ಲಿ ತೊಂದರೆ, ಸತತವಾಗಿ ನೀರು ಸುರಿಯುವುದು, ಲೆಪ್ರ ಪ್ರತಿಕ್ರಿಯೆ, ತ್ವಚೆಯ ಮೇಲೆ ಕೆಂಪಾದ ಊತ, ನೋವಿನಿಂದ ಕೂಡಿದ ಹಗ್ಗದ ಹಾಗೆ ಊದಿಕೊಂಡ ನರಗಳು, ತಿಳಿ ಬಿಳಿ ಬಣ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು ಕುಷ್ಠರೋಗದ ಪ್ರಮುಖ ಲಕ್ಷಣಗಳು. ಇವುಗಳಲ್ಲಿ ಯಾವುದೇ ಚಿಹ್ನೆಗಳು ಕಂಡು ಬಂದಲ್ಲಿ ತಕ್ಷಣವೇ ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಂದ ತಪಾಸಣೆಗೊಳಗಾಗಬೇಕು ಮನವಿ ಮಾಡಿದೆ.

*ಸಹಾಯವಾಣಿಗೆ ಕರೆ

ಕುಷ್ಠರೋಗಕ್ಕೆ ಬಹುವಿಧ ಔಷಧ ಹಾಗೂ ಚಿಕಿತ್ಸೆಯು ಸರ್ಕಾರಿ ಆಸ್ಪತ್ರೆಗಳಲ್ಲಿ ಸಂಪೂರ್ಣ ಉಚಿತ. ಹೆಚ್ಚಿನ ಮಾಹಿತಿಗಾಗಿ ಆರೋಗ್ಯ ಸಹಾಯಕ, ಸಹಾಯಕಿಯರು, ಸಮುದಾಯ ಆರೋಗ್ಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಇಲ್ಲವೇ ಆರೋಗ್ಯ ಸಹಾಯವಾಣಿ ೧೦೪ ಕ್ಕೆ ಕರೆ ಮಾಡಿ ಸಂಪರ್ಕಿಸಬಹುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

*ಪ್ರತಿಜ್ಞೆ ಸ್ವೀಕಾರ

ಆಂದೋಲನವನ್ನು ಒಟ್ಟಾಗಿ, ನಾವು ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸೋಣ, ತಪ್ಪು ಕಲ್ಪನೆಗಳನ್ನು ಹೋಗಲಾಡಿಸೋಣ, ಕುಷ್ಠರೋಗದಿಂದ ಯಾರೂ ಬಾಧಿತರಾಗದಂತೆ ನೋಡಿಕೊಳ್ಳೋಣ ಎಂಬ ಘೋಷ ವಾಕ್ಯದೊಂದಿಗೆ ಕೈಗೊಳ್ಳಲಾಗಿದೆ. ಚಿಕ್ಕಬಳ್ಳಾಪುರವನ್ನು ಕುಷ್ಠಮುಕ್ತ ಜಿಲ್ಲೆಯನ್ನಾಗಿಸಲು ಶ್ರಮಿಸಲಾಗುತ್ತಿದೆ. ಇದರ ಬಗ್ಗೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ನೇತೃತ್ವದಲ್ಲಿ ಪ್ರತಿಜ್ಞೆ ಸ್ವೀಕರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net