ಸರ್ಕಾರದಿಂದ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಸಿಗಲಿ: ಕೃಷಿಕ ಲಯನ್ಸ್ ಸಂಸ್ಥೆ ಆಡಳಿತಾಧಿಕಾರಿ ಕೆ.ಟಿ.ಹನುಮಂತು ಒತ್ತಾಯ

1 (4)
Published on

ಮಂಡ್ಯ: ಸರ್ಕಾರ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕಿದೆ ಎಂದು ಕೃಷಿಕ ಲಯನ್ಸ್ ಸಂಸ್ಥೆ ಆಡಳಿತಾಧಿಕಾರಿ ಕೆ.ಟಿ.ಹನುಮಂತು ಒತ್ತಾಯಿಸಿದರು.

ನಗರದ ಕೆರೆಅಂಗಳದ ಮೆಟ್ರಿಕ್ ನಂತರ ಬಾಲಕಿಯರ ವಸತಿ ನಿಲಯದ ಆವರಣದಲ್ಲಿ ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿ, ಕೃಷಿಕ ಲಯನ್ಸ್ ಸಂಸ್ಥೆ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮೇಜರ್ ಧ್ಯಾನ್ ಚಂದ್ ಒಂದು ನೆನಪು ಹಾಗೂ ರಾಷ್ಟ್ರೀಯ ಕ್ರೀಡಾಪಟುಗಳಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.

ಕ್ರೀಡೆಗೆ ಸರ್ಕಾರ ಹೆಚ್ಚು ಅವಕಾಶ ಕಲ್ಪಿಸುವ ಮೂಲಕ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಬೇಕು. ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಬಾಲ್ಯದಿಂದಲೂ ಕ್ರೆಡೆಯಲ್ಲಿ ಆಸಕ್ತಿ ವಹಿಸಿ ಸಾಧನೆ ಮಾಡಿದವರು ಒಲಂಪಿಕ್ ನಲ್ಲಿ ಸತತವಾಗಿ ಚಿನ್ನದ ಪದಕ ಗಳಿಸಿ ವಿಶ್ವಮಟ್ಟದಲ್ಲಿ ಭಾರತದ ಹಾಕಿ ಆಟವನ್ನು ಗುರುತಿಸುವಂತೆ ಮಾಡಿದ ಶ್ರೇಷ್ಟ ಆಟಗಾರ. ಇವರ ನೆನಪಿನ ಅಂಗವಾಗಿ ನಮ್ಮ ಸಂಸ್ಥೆಯ ಮೂಲಕ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟುಗಳನ್ನು ಗುರುತಿಸಿ ಅಭಿನಂದಿಸುತ್ತಿದ್ದೇವೆ ಎಂದು ಹೇಳಿದರು.

ಪ್ರತಿಭಾಂಜಲಿ ಅಕಾಡೆಮಿ ಅಧ್ಯಕ್ಷ ಪ್ರೊ.ಡೇವಿಡ್ ಮಾತನಾಡಿ, ಕ್ರೀಡಾ ಮನೋಭಾವವನ್ನು ಎಲ್ಲರೂ ಬೆಳೆಸಿಕೊಳ್ಳಬೇಕು. ಕ್ರೀಡೆಗೆ ಯಾವುದೇ ಜಾತಿ ಮತ ಧರ್ಮ ಇರುವುದಿಲ್ಲ. ಆಟೋಟದಲ್ಲಿ ಭಾಗವಹಿಸುವುದರಿಂದ ದೇಹ ಮನಸ್ಸು ಸದೃಢವಾಗುವುದಲ್ಲದೆ ಸ್ನೇಹಜೀವಿಯಾಗಲು ಸಹಕಾರಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು,

ಹಿಂದುಳಿದ ವರ್ಗಗಳ ಇಲಾಖೆ ತಾಲೂಕು ಕಲ್ಯಾಣಾಧಿಕಾರಿ ಎಂ.ಟಿ.ಶ್ರೀನಿವಾಸ್, ಪತ್ರಕರ್ತ ನವೀನ್ ಚಿಕ್ಕಮಂಡ್ಯ, ಲಯನ್ಸ್ನ ರತ್ನಮ್ಮ, ನೀನಾಪಟೇಲ್, ಯೋಗಿತಾ, ಅಮೂಲ್ಯ, ಉಷಾ ಇತರರಿದ್ದರು.

ಇದೇ ವೇಳೆ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಆಟಗಾರರಾದ ಸಿ.ಬಿ.ಚಲುವೇಗೌಡ, ವಿಷ್ಣು ಮೊದಲಿಯಾರ್, ಲಿಖಿತಾ, ನಂದಕಿಶೋರ, ಬಿ.ಯ.ಉನ್ನತಿ, ರಕ್ಷಿತಾ, ಬೃಂದಾ, ಅನುಘ್ನಾ ಆನಂದ್ ಅವರನ್ನು ಅಭಿನಂದಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net