ಉಜ್ವಲ ಭವಿಷ್ಯಕ್ಕೆ ಕ್ರೀಡೆಯೂ ಪೂರಕ: ಬದುಕು ಬೆಳಕು ಸೇವಾ ಸಮಿತಿ ಅಧ್ಯಕ್ಷ ಎಚ್.ಆರ್.ಅರವಿಂದ್ ಅಭಿಮತ

1 (2)
Published on

ಮಂಡ್ಯ: ವಿದ್ಯಾರ್ಥಿ ಜೀವನದಲ್ಲಿ ಪಠ್ಯದೊಂದಿಗೆ ಕ್ರೀಡೆಗೂ ಹೆಚ್ಚು ಮಹತ್ವ ನೀಡಿದರೆ ಉಜ್ವಲ ಭವಿಷ್ಯಕ್ಕೆ ಪೂರಕವಾಗುತ್ತದೆ ಎಂದು ಬದುಕು ಬೆಳಕು ಸೇವಾ ಸಮಿತಿ ಅಧ್ಯಕ್ಷ ಎಚ್.ಆರ್.ಅರವಿಂದ್ ಹೇಳಿದರು.

ನಗರದ ಸರ್ಕಾರಿ ಪ್ರೌಢಶಾಲೆ(ಮಾಜಿ ಪುರಸಭೆ)ಯಲ್ಲಿ ಬದುಕು ಬೆಳೆಕು ಸೇವಾ ಸಮಿತಿ, ಡಾ.ರಾಮೇಗೌಡ ಸ್ಮರಣಾರ್ಥ, ನಿವೃತ್ತ ಶಿಕ್ಷಕ ಮಾಯಿಗಶೆಟ್ಟಿ ಸೇವಾ ಸಮಿತಿ, ಅಮೃತ ಲಯನ್ಸ್ ಸಂಸ್ಥೆ ಸಹಯೋಗದಲ್ಲಿ ಶುಕ್ರವಾರ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರೀಡಾಪಟುಗಳಿಗೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕ್ರೀಡಾ ಕೋಟಾದಿಂದ ಉನ್ನತ ಶಿಕ್ಷಣ ಮತ್ತು ಉದ್ಯೋಗ ಲಭ್ಯತೆಯಿದೆ. ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದರಿಗೆ ಮೀಸಲು ಇರುತ್ತದೆ. ಕ್ರೀಡೆಯನ್ನು ನಿರಂತರ ಅಭ್ಯಾಸ ಮಾಡಿದರೆ ಸಾಧನೆಯೊಂದಿಗೆ ಉತ್ತಮ ಆರೋಗ್ಯ, ಅಯಸ್ಸು ನಿಮ್ಮದಾಗುತ್ತದೆ. ಧ್ಯಾನ್‌ಚಂದ್ ಹಾಕಿಯ ಮೊದಲ ಸೂಪರ್‌ಸ್ಟಾರ್ ಆಗಿದ್ದರು. ಒಲಿಂಪಿಕ್ಸ್‌ನಲ್ಲಿ ಭಾರತವು ಸತತ ಮೂರು ಚಿನ್ನದ ಪದಕ ಗೆಲ್ಲುವಲ್ಲಿ ಮುಖ್ಯ ಪಾತ್ರ ವಹಿಸಿದ್ದರು. ಇಂತಹವರನ್ನು ಸ್ಮರಿಸಿಕೊಳ್ಳುವುದು ಅವಶ್ಯಕವಿದೆ. ಕ್ರೀಡಾ ಕ್ಷೇತ್ರದಲ್ಲಿ ಭಾರತ ಮುನ್ನುಗುತ್ತಿದೆ ಎಂದರು.

ಶಾಲೆಯ ಹಿರಿಯ ಸಹ ಶಿಕ್ಷಕ ಕೆ.ಜೆ.ಮಲ್ಲಿಕಾರ್ಜುನ್, ಅಮೃತ ಲಯನ್ಸ್ ಸಂಸ್ಥೆ ಅಧ್ಯಕ್ಷ ಎಂ.ಲೋಕೇಶ್, ನಿವೃತ್ತ ಜಿಲ್ಲಾ ವ್ಯವಸ್ಥಾಪಕ ಎಂ.ಮಂಜುನಾಥ್, ಉದ್ಯಮಿ ಎಂ.ವಿನಯ್‌ಕುಮಾರ್ ಇತರರಿದ್ದರು. ಇದೇ ಸಂದರ್ಭದಲ್ಲಿ ಸಾಧಕ ಕ್ರೀಡಾಪಟುಗಳನ್ನು ಅಭಿನಂದಿಸಲಾಯಿತು. ಅಂತೆಯೇ ಪ್ರಬಂಧ ಸ್ಪರ್ಧೆ ವಿಜೇತ ಮಕ್ಕಳಿಗೆ ಗಣ್ಯರು ಬಹುಮಾನ ವಿತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net