ಆರೋಗ್ಯವಂತ ಜೀವನಕ್ಕೆ ಕ್ರೀಡೆ ಅಗತ್ಯ

29 Dwd 4
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಕ್ರೀಡಾಸಕ್ತಿ ಇರುವ ಮಕ್ಕಳನ್ನು ಗುರುತಿಸಿ ಸಮಾಜದ ಮುಖ್ಯವಾಹಿನಿಗೆ ತರುವುದು ನಮ್ಮೆಲ್ಲರ ಕರ್ತವ್ಯ. ಆರೋಗ್ಯಪೂರ್ಣ ಜೀವನಕ್ಕೆ ಕ್ರೀಡೆ ಅಗತ್ಯ ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಕ್ರೀಡಾ ಇಲಾಖೆ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ ಮಾತನಾಡಿ, ಕ್ರೀಡೆಗೆ ಪ್ರೋತ್ಸಾಹ ಅಗತ್ಯ. ಜಿಲ್ಲೆಯಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಹುಡಾದಿಂದ ಅಗತ್ಯ ನಿವೇಶನ ಒದಗಿಸಲು ಪ್ರಯತ್ನಿಸುತ್ತೇನೆ ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಟಿ. ಮಂಜುನಾಥಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ರೀಡಾ ಇಲಾಖೆ ತರಬೇತುದಾರರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net