ಸಾಹಿತ್ಯ, ಸಾಂಸ್ಕೃತಿಕ ನಿಕ್ಷೇಪಗಳ ಅಧ್ಯಯನ : ಪ್ರೊ.ಎಸ್.ಸತೀಶ್ಚಂದ್ರ ಸಲಹೆ

New Project (10)
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ತತ್ವಪದಗಳಲ್ಲಿ ಸಮಾಜದ ಸರ್ವತೋಮುಖ ಪ್ರಗತಿಗೆ ಪೂರಕವಾದ, ವಿಶ್ವಮಾನವ ಪ್ರಜ್ಞೆ ಮೂಡಿಸುವ, ಸಮಾಜ ಸುಧಾರಣೆಯ ನೈತಿಕ ಮತ್ತು ಆಧ್ಯಾತ್ಮಿಕ ಮೌಲ್ಯಗಳ ಸತ್ವಪೂರ್ಣ ಸಂದೇಶವಿದ್ದು, ಅದರ ಅನುಷ್ಠಾನದಿಂದ ಎಲ್ಲೆಡೆ ಶಾಂತಿ, ನೆಮ್ಮದಿ ನೆಲೆಸುತ್ತದೆ. ರಾಜ್ಯದ ವಿವಿಧ ಕಡೆಗಳಲ್ಲಿರುವ ಸಾಹಿತ್ಯ ಮತ್ತು ಸಾಂಸ್ಕೃತಿಕ ನಿಕ್ಷೇಪಗಳ ಅಧ್ಯಯನ ಮತ್ತು ಸಂಶೋಧನೆ ಮಾಡಬೇಕು ಎಂದು ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ.ಎಸ್.ಸತೀಶ್ಚಂದ್ರ ಹೇಳಿದರು.

ಉಜಿರೆಯಲ್ಲಿ ಶುಕ್ರವಾರ ಎಸ್‌ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ಕನ್ನಡ ವಿಭಾಗ ಸಹಯೋಗದೊಂದಿಗೆ ಬೆಂಗಳೂರಿನ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರ ಆಶ್ರಯದಲ್ಲಿ ಆಯೋಜಿಸಿದ ‘ತತ್ವಪದಗಳು- ಸಾಂಸ್ಕೃತಿಕ ಅನುಸಂಧಾನ’ ರಾಷ್ಟ್ರೀಯ ವಿಚಾರಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಪ್ರಾಂಶುಪಾಲ ಪ್ರೊ.ಪಿ.ವಿಶ್ವನಾಥ್ ಅಧ್ಯಕ್ಷತೆ ವಹಿಸಿದ್ದರು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ಸಂಯೋಜಕ ಪ್ರೊ.ಎಸ್.ಎನ್.ಕಾಕತ್ಕರ್ ಬಿ.ಎ. ಅಂತಿಮ ಪದವಿ ತರಗತಿ ವಿದ್ಯಾರ್ಥಿಗಳು ರಚಿಸಿದ ಭಿತ್ತಿಪತ್ರಿಕೆ ಅನಾವರಣಗೊಳಿಸಿದರು. ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಹಿರಿಯ ಅಧಿಕಾರಿ ಸತ್ಯನಾರಾಯಣ ಮತ್ತು ನಿವೃತ್ತ ಪ್ರಾಂಶುಪಾಲ ಪ್ರೊ.ಬಿ.ಎ.ಕುಮಾರ ಹೆಗ್ಡೆ ಉಪಸ್ಥಿತರಿದ್ದರು. ಕನ್ನಡ ವಿಭಾಗ ಮುಖ್ಯಸ್ಥೆ ಪ್ರೊ.ಬೋಜಮ್ಮ ಸ್ವಾಗತಿಸಿದರು. ವಿಚಾರಸಂಕಿರಣದ ಸಂಚಾಲಕ ಪ್ರೊ.ನಾಗಣ್ಣ ಡಿ.ಎ. ವಂದಿಸಿದರು. ಕನ್ನಡ ಉಪನ್ಯಾಸಕಿ ಭವ್ಯಶ್ರೀ ಬಳ್ಳಾಲ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net