ಮಕ್ಕಳಿಗೆ ಏಕತೆಯ ಸಂದೇಶ ತಿಳಿಸಿಕೊಡಿ: ಜಿಲ್ಲಾಧಿಕಾರಿ ಡಾ.ಕುಮಾರ ಸಲಹೆ

National Unity Day Mandya
Published on

ಮಂಡ್ಯ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಅಖಂಡ ಭಾರತದ ಪರಿಕಲ್ಪನೆಯನ್ನು ನಾವೆಲ್ಲರೂ ಹೊಂದಬೇಕು. ಮಾತ್ರವಲ್ಲದೆ ಅವರ ಆದರ್ಶವನ್ನ ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದರ ಜತೆಗೆ ಏಕತೆಯ ಸಂದೇಶವನ್ನು ಪ್ರತಿಯೊಬ್ಬರೂ ತಮ್ಮ ಮಕ್ಕಳ ಮೂಲಕ ತಿಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಏಕತಾ ದಿವಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅ.31ರಂದು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನೋತ್ಸವ. 2014ರಿಂದ ಕೇಂದ್ರ ಸರ್ಕಾರ ಈ ದಿನವನ್ನು ರಾಷ್ಟ್ರೀಯ ಏಕತಾ ದಿವಸವೆಂದು ಘೋಷಣೆ ಮಾಡಿದೆ ಎಂದರು.

ವಲ್ಲಭಭಾಯಿ ಪಟೇಲ್ ಅವರು ಸ್ವತಂತ್ರ ಭಾರತದ ಮೊದಲ ಗೃಹ ಸಚಿವರಾಗಿದ್ದಂತಹ ಸಂದರ್ಭದಲ್ಲಿ ಸ್ವಾತಂತ್ರ್ಯ ಬಂದಿದ್ದರೂ ಕೂಡ ವಿವಿಧ ಭಾಷೆಗಳ ಆಧಾರದಲ್ಲಿ ಹರಿದು ಹಂಚಿ ಹೋಗಿದ್ದಂತಹ ಪ್ರಾಂತ್ಯಗಳನ್ನು ಒಗ್ಗೂಡಿಸಿ, ಏಕೀಕೃತ ಭಾರತ ಹಾಗೂ ಅಖಂಡ ಭಾರತವನ್ನಾಗಿ ಮಾಡಬೇಕೆಂದು ಬಹಳ ಶ್ರಮವಹಿಸಿದವರು. ಏಕತೆ ಮಂತ್ರವನ್ನು ಸಾರಿ ಭಾಷಾ ಪ್ರಾಂತ್ಯವನ್ನು ಒಂದುಗೂಡಿಸುವ ಕನಸನ್ನು ಕಂಡಂತಹ ಮಹಾನ್ ಮಾನವತಾವಾದಿ ವಲ್ಲಭಬಾಯಿ ಪಟೇಲ್ ಅವರನ್ನು ನಾವೆಲ್ಲರೂ ಇಂದು ಸ್ಮರಿಸಬೇಕು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಮಂಡ್ಯ ಉಪ ವಿಭಾಗಾಧಿಕಾರಿ ಎಂ.ಶಿವಮೂರ್ತಿ, ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಬಿ.ಜಯಪ್ರಕಾಶ ಗೌಡ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಕೃಷ್ಣಕುಮಾರ್, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ರಾಘವೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್, ತಹಸೀಲ್ದಾರ್ ಡಾ.ಶಿವಕುಮಾರ್ ಬಿರಾದರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net