

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿಶ್ವಕರ್ಮ ಜನ ಸೇವಾ ಸಂಘದ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ ಹಾಗೂ ಜಿಲ್ಲಾ ಮಹಿಳಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಭಾಸ್ಕರ ಬಡಿಗೇರ ರಾಷ್ಟ್ರೀಯ ವಿಶ್ವಕರ್ಮ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಾನೂನು ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಆಯ್ಕೆ ಮಾಡಲಾಗಿದೆ. ನವದೆಹಲಿಯ ಕರ್ನಾಟಕ ಸಂಘದ ಸಭಾಂಗಣದಲ್ಲಿ ಬೆಂಗಳೂರಿನ ಜನ್ಮಭೂಮಿ ಫೌಂಡೇಷನ್ ವತಿಯಿಂದ ಸೆ. 28ರಂದು ನಡೆಯುವ ವಿಶ್ವಕರ್ಮ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.