ರಾಷ್ಟ್ರೀಯ ಮತದಾನ ದಿನಾಚರಣೆ

mng-24dec-shakti college
Published on


ಮಂಗಳೂರು : ಚುನಾವಣಾ ಆಯೋಗ, ಸ್ವೀಪ್ ಸಮಿತಿ, ದ.ಕ. ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ, ಶಕ್ತಿ ಪದವಿ ಪೂರ್ವಕಾಲೇಜು ಶಕ್ತಿನಗರ ವತಿಯಿಂದ ಶಕ್ತಿ ಶಿಕ್ಷಣ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಭವನದಲ್ಲಿ ರಾಷ್ಟ್ರೀಯ ಮತದಾನದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳು ನಡೆದವು.
ಕಾರ್ಯಕ್ರಮ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ ಮಾತನಾಡಿ ‘ ಪ್ರಸ್ತುತ ಜಗತ್ತಿನ 500 ದೊಡ್ಡ ಕಂಪನಿಗಳಲ್ಲಿ ಶೇ.30ರಷ್ಟು ಭಾರತೀಯರು ಸಿಇಒಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಭಾರತದ ಯುವ ಪೀಳಿಗೆ ಬಹಳಷ್ಟು ಮುಂದುವರಿದಿದ್ದು, 2047ರಲ್ಲಿ ಭಾರತವು ವಿಶ್ವಗುರುವಾಗಬೇಕೆನ್ನುವ ಸಂಕಲ್ಪ ಸಾಕಾರವಾಗಲಿದೆ. ಇದಕ್ಕೆ ಪೂರಕವಾಗಿ ಭವಿಷ್ಯದ ದಿನಗಳಲ್ಲಿ ಉತ್ತಮ ನಾಯಕರನ್ನು ಆಯ್ಕೆ ಮಾಡಿ ಭವ್ಯ ಭಾರತದ ನಿರ್ಮಾಣಕ್ಕೆ ಇಂದಿನ ಯುವ ಪೀಳಿಗೆ ಕೊಡುಗೆ ನೀಡಬೇಕು ಎಂದರು.
ಮುಖ್ಯ ಅತಿಥಿಯಾಗಿದ್ದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬಿ.ಆರ್.ಮಾತನಾಡಿ ‘ ವಿದ್ಯಾರ್ಥಿಗಳು ದೇಶದ ವಿದ್ಯಮಾನಗಳನ್ನು ಗಮನಿಸಬೇಕು, ಯಾವುದೇ ಆಮಿಷಗಳಿಗೆ ಬಲಿಯಾಗದೆ, ಉದ್ವೇಗಗಳಿಗೆ ಒಳಗಾಗದೆ ಮತದಾನದ ಮೂಲಕ ಅರ್ಹ ವ್ಯಕ್ತಿಯನ್ನು ಆಯ್ಕೆ ಮಾಡಬೇಕು ಎಂದರು.
ಶಕ್ತಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ. ಕೆ. ಸಿ. ನಾಕ್ ಅಧ್ಯಕ್ಷತೆ ವಹಿಸಿದ್ದರು
ದ.ಕ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ. ಡಿ. ಜಯಣ್ಣ ,ಪದವಿ ಪೂರ್ವ ಕಾಲೇಜುಗಳ ನೋಡಲ್
ಅಧಿಕಾರಿ ಚಂದ್ರನಾಥ್ , ಶಕ್ತಿ ಶಿಕ್ಷಣ ಸಂಸ್ಥೆಯ ಸಲಹೆಗಾರ ರಮೇಶ್ ಕೆ, ಶಕ್ತಿ ಪ.ಪೂ. ಕಾಲೇಜಿನ ಪ್ರಾಂಶುಪಾಲವೆಂಕಟೇಶಮೂರ್ತಿ ಎಚ್., ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಬಬಿತ ಸೂರಜ್ ಉಪಸ್ಥಿತರಿದ್ದರು. ಉಪನ್ಯಾಸಕರಾದ ಸಬಿತಾ ಕಾಮತ್ ಸ್ವಾಗತಿಸಿ, ಶಕುಂತಲಾ ಜಯರಾಮ್ ವಂದಿಸಿದರು. ಸುನಿಲ್ ಪಲ್ಲಮಜಲು ಕಾರ್ಯಕ್ರಮ ನಿರೂಪಿಸಿದರು. ತಾಲೂಕು ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ಪ್ರಬಂಧ ಸ್ಪರ್ಧೆ, ಭಿತ್ತಿ ಚಿತ್ರ ಸ್ಪರ್ಧೆ ಮತ್ತು ರಸಪ್ರಶ್ನೆ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಉಪನ್ಯಾಸಕರಾದ ದಿನೇಶ್ ಶೆಟ್ಟಿ ಅಳಿಕೆ, ಅಬ್ದುಲ್ ರಜಾಕ್, ಚಿತ್ರಲೇಖಾ, ಶ್ಯಾಮಲಾ ತೀರ್ಪುಗಾರರಾಗಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net