ಪ್ರಜಾಪ್ರಭುತ್ವದಲ್ಲಿ ನಿರ್ಣಾಯಕ ಪಾತ್ರ : ತಹಸೀಲ್ದಾರ್ ಅರ್ಚನಾ ಭಟ್ ಹೇಳಿಕೆ

New Project (38)
Published on

ಬಂಟ್ವಾಳ: ತಾಲೂಕು ಆಡಳಿತ ಸೌಧದಲ್ಲಿ ರಾಷ್ಟ್ರೀಯ ಮತದಾರರ ದಿನ ಆಚರಿಸಲಾಯಿತು.

ತಹಸೀಲ್ದಾರ್ ಡಿ.ಅರ್ಚನಾ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಜಾಪ್ರಭುತ್ವದ ಯಶಸ್ಸಿನಲ್ಲಿ ಮತದಾರರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಮತದಾರರ ಜಾಗೃತಿಗಾಗಿ ಪ್ರತಿ ವರ್ಷ ಮತದಾರರ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು ಮಾತ್ರವಲ್ಲದೆ ವರ್ಷಪೂರ್ತಿ ಮತದಾರರು ತಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಜಾಗೃತರಾಗಿರಬೇಕು ಎಂದರು.

ಈ ಸಂದರ್ಭದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಚುನಾವಣೆ ಶಾಖೆಯ ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು, ಆಹಾರ ಶಿರಸ್ತೇದಾರ್ ಶಿವಪ್ರಸಾದ್, ಚುನಾವಣೆ ವಿಷಯ ನಿರ್ವಾಹಕ ಕೆ.ಎಚ್.ಮಂಜುನಾಥ್, ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ರವಿ .ಎಂ.ಎನ್, ತಾಲೂಕು ಕಚೇರಿ ಸಿಬ್ಬಂದಿ ವರ್ಗ, ತಾಲೂಕು ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net