ಜ.25ರಂದು ರಾಷ್ಟ್ರೀಯ ಮತದಾರರ ದಿನ: ಮಂಡ್ಯ ಉಪವಿಭಾಗಾಧಿಕಾರಿ ಎಚ್.ಎಸ್.ಕೀರ್ತನಾ ನೇತೃತ್ವದಲ್ಲಿ ಪೂರ್ವಭಾವಿ ಸಭೆ

20_01_Mdy_04(Ac Meeting)
Published on

ಮಂಡ್ಯ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಜ.25ರಂದು ಮಧ್ಯಾಹ್ನ 1ಗಂಟೆಗೆ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲಾಗುವುದು ಎಂದು ಮಂಡ್ಯ ಉಪವಿಭಾಗಾಧಿಕಾರಿ ಎಚ್.ಎಸ್.ಕೀರ್ತನಾ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಮಿನಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ವರ್ಷ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಇರುವುದರಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಯುವ ಮತದಾರರರಿಗೆ ಮತದಾನದ ಮಹತ್ವ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಮತದಾನಕ್ಕಿಂತ ಇನ್ನೊಂದಿಲ್ಲ. ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಧ್ಯೇಯವಾಕ್ಯದಲ್ಲಿ ಈ ಬಾರಿಯ ರಾಷ್ಟ್ರೀಯ ಮತದಾರರ ದಿನಾಚರಣೆ ನಡೆಯಲಿದೆ. ಅಂದು ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಿಂದ ಕಲಾಮಂದಿರದವರೆಗೆ ಜಾಥಾ ಕಾರ್ಯಕ್ರಮ ನಡೆಯಲಿದೆ. ಯುವ ಮತದಾರರು ಹಾಗೂ ಯುವ ಮತದಾರರಿಗೆ ಪ್ರೇರಣೆ ನೀಡಲು ಶತಾಯುಷಿ ಮತದಾರರು ಪಾಲ್ಗೊಳ್ಳುವ ವ್ಯವಸ್ಥೆ ಮಾಡಿ. 9.30ಕ್ಕೆ ಕಲಾಮಂದಿರದಲ್ಲಿ ಮತದಾನ ಜಾಗೃತಿ ಕುರಿತಂತೆ ರಂಗೋಲಿ ಸ್ಪರ್ಧೆ ಆಯೋಜಿಸಿ ಸ್ಥಳದಲ್ಲೇ ನೋಂದಣಿ ಮಾಡಿಕೊಂಡು ಗೆದ್ದವರಿಗೆ ಸೂಕ್ತ ಬಹುಮಾನ ಕೊಡಬೇಕು ಎಂದರು.

ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಸಂಜೀವಪ್ಪ, ತಹಸೀಲ್ದಾರ್ ಕುಂಞ ಅಹಮದ್, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಶ್ರೀನಿವಾಸ್, ಡಿಡಿಪಿಯು ಉಮೇಶ್, ತಾಪಂ ಇಒ ವೇಣುಗೋಪಾಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net