ರಾಷ್ಟ್ರೀಯ ಮತದಾರರ ದಿನ ಇಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತದ ಆಶ್ರಯದಲ್ಲಿ ಜ. 25ರಂದು ಬೆಳಗ್ಗೆ 10 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ್​ ಸಾಂಸ್ಕೃತಿಕ ಭವನದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಆಯೋಜಿಸಲಾಗಿದೆ.

ಹಿರಿಯ ಸಿವಿಲ್​ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಪೊಲೀಸ್​ ಆಯುಕ್ತ ಎನ್​. ಶಶಿಕುಮಾರ, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ. ಗೋಪಾಲ ಬ್ಯಾಕೋಡ, ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಕರ್ನಾಟಕ ವಿಶ್ವ ವಿದ್ಯಾಲಯದ ಕುಲಸಚಿವ ಡಾ. ಎ. ಚನ್ನಪ್ಪ ಭಾಗವಹಿಸುವರು. ಜಿಲ್ಲಾಧಿಕಾರಿ ದಿವ್ಯ ಪ್ರಭು ಅಧ್ಯಕ್ಷತೆ ವಹಿಸುವರು.

ಉಪವಿಭಾಗಾಧಿಧಿಕಾರಿ ಶಾಲಂ ಹುಸೇನ್​, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ, ಮತಗಟ್ಟೆ ಅಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ಸಿಬ್ಬಂದಿ, ಇತರರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net