ಸಂಸ್ಕೃತಿಯಲ್ಲಿ ಉದಾತ್ತ ವಿಚಾರಗಳ ಜಾಗೃತಿ

youth
Published on

ಶಂಕರನಾರಾಯಣ: ಸ್ವಾಮಿ ವಿವೇಕಾನಂದರು ಭಾರತೀಯರಲ್ಲಿ ಹಾಗೂ ವಿಶ್ವಾದ್ಯಂತ ನಮ್ಮ ಸಂಸ್ಕೃತಿಯಲ್ಲಿ ಉದಾತ್ತ, ಮಹತ್ತರ ವಿಚಾರಗಳ ಮಾರ್ಗಗಳ ಜಾಗೃತಿ ಮೂಡಿಸುವ ಕಾರ್ಯವನ್ನು ತಮ್ಮ ವಿಚಾರಧಾರೆಗಳಿಂದ ಮಾಡಿದರು ಎಂದು ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಶಂಕರನಾರಾಯಣ ರಾಜ್ಯಶಾಸ್ತ್ರ ವಿಭಾಗ ಮುಖಸ್ಥ ಪ್ರಸ್ತುತ ವೈ.ಎನ್. ಹೇಳಿದರು.

ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸ್ನಾತಕೋತ್ತರ ವಿಭಾಗ ವತಿಯಿಂದ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಲ್ಲಿ ರಾಷ್ಟ್ರೀಯ ಯುವ ದಿನಾಚರಣೆಯಲ್ಲಿ ಮಾತನಾಡಿದರು.

ಪ್ರಾಂಶುಪಾಲ ಡಾ.ವೆಂಕಟರಾಮ್ ಭಟ್ ಅಧ್ಯಕ್ಷತೆ ವಹಿಸಿ, ವಿವೇಕಾನಂದರ ವಿಚಾರಧಾರೆ ಇಂದಿನ ಯುವಜನಾಂಗಕ್ಕೆ ಸ್ಫೂರ್ತಿ ಎಂದರು.

ಸ್ನಾತಕೋತ್ತರ ವಿಭಾಗ ಸಂಯೋಜಕಿ ಪ್ರಜ್ಞಾ ಉಪಸ್ಥಿತರಿದ್ದರು. ಸಹಾಯಕ ಪ್ರಾಧ್ಯಾಪಕ ರಮೇಶ್ ಎನ್.ಎಸ್. ಕಾರ್ಯಕ್ರಮ ನಿರೂಪಿಸಿದರು. ವಾಣಿಜ್ಯ ವಿಭಾಗ ಸಹಾಯಕ ಪ್ರಾಧ್ಯಾಪಕಿ ಪ್ರವೀಣ ಎಂ. ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net