ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ

medical college
Published on

ಮಡಿಕೇರಿ: ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‌ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಡಗು, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಭೋದಕ ಆಸ್ಪತ್ರೆಯಲ್ಲಿ ಆಚರಿಸಲಾಯಿತು.


ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಪ್ರಾಂಶುಪಾಲ ಡಾ.ನರಸಿಂಹ ರೈರವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಇ.ಎನ್.ಟಿ. ವಿಭಾಗ ಮುಖ್ಯಸ್ಥ ಡಾ.ಶ್ವೇತಾ, ಡಾ.ಪ್ರಿಯದರ್ಶಿನಿ, ಡಾ. ನಳಿನ, ಡಾ.ಸಾತ್ಯಕಿ, ಡಾ.ನೀರಜ್ ಇತರರು ಉಪಸ್ಥಿತರಿದ್ದರು


ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕಿ ಸುನೀತ ಮುತ್ತಣ್ಣರವರು ಯುವ ಜನತೆ ಮತ್ತು ಎಚ್.ಐ.ವಿ ಬಗ್ಗೆ ಮಾಹಿತಿ ನೀಡಿದರು. ನಂತರ ನಡೆದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ ಭಿತ್ತಿ ಚಿತ್ರ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು. ಕೆ.ಪಿ.ಗೌರವ್(ಪ್ರ), ದರ್ಶನ್.ಎನ್(ದ್ವಿ), ಸಿ.ಪ್ರತೀಕ್ಷಾ ತೃತೀಯ ಬಹುಮಾನ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net