ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನ

Deadline for purchasing FAQ sunflowers
Published on

ವಿಜಯಪುರ: ಕೇಂದ್ರ ಸರ್ಕಾರದಿಂದ ಅಂಗವಿಕಲರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆಗೈದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ನೀಡುವ ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ಜು. 31ರಂದು ಕೊನೇ ದಿನವಾಗಿದೆ. ಅಭ್ಯರ್ಥಿಗಳು 2 ಪಾಸ್​ಪೋರ್ಟ್​ ಅಳತೆಯ ಭಾವಚಿತ್ರ (ವ್ಯಕ್ತಿ ವಿಭಾಗ), ಒಂದು ಪುಟಕ್ಕೆ ಮೀರದಷ್ಟು ಅರ್ಜಿದಾರರ ವ್ಯಕ್ತಿ, ಸಂಸ್ಥೆಗಳಿಂದ ಸ್ವ&ವಿವರ ಹಾಗೂ ಸಾಧನೆಗಳ ಸಾರಾಂಶ, ಪೂರಕ ದಾಖಲೆ ಹಾಗೂ ಇತರೆ ದಾಖಲೆಗಳೊಂದಿಗೆ ಡಿಡಿಡಿ.ಚಡಿಚ್ಟಛಠ.ಜಟಡ.ಜ್ಞಿ & ಡಿಡಿಡಿ.ಛಛಿಟಡಿಛ.ಜಟಡ.ಜ್ಞಿ ವೆಬ್​ಸೈಟ್​ನಲ್ಲಿ ಅರ್ಜಿ ಸಲ್ಲಿಸಬೇಕು. ಆನ್​ಲೈನಲ್ಲಿ ತಮ್ಮ ಎಲ್ಲ ದಾಖಲತಿಗಳನ್ನು ಭರ್ತಿ ಮಾಡಿ ಸಲ್ಲಿಸಿದ ಅರ್ಜಿ ಮತ್ತು ದಾಖಲೆಗಳ ಪ್ರತಿಯನ್ನು ಜಿಪಂ ಆವರಣದಲ್ಲಿರುವ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಸಲ್ಲಿಸಬೇಕು. ಮಾಹಿತಿಗೆ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net