

ಕೋಟ: ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದರೆ ಮುಂದಿನ ಭವಿಷ್ಯಕ್ಕೆ ಸಹಕಾರಿ ಎಂದು ಪರಿಸರವಾದಿ ವಿನಯಚಂದ್ರ ಸಾಸ್ತಾನ ಹೇಳಿದರು.
ಕೋಟದ ಪಂಚವರ್ಣ ಯುವಕ ಮಂಡಲ, ಮಹಿಳಾ ಮಂಡಲ ನೇತೃತ್ವದಲ್ಲಿ ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ಗೆಳೆಯರ ಬಳಗ ಕಾರ್ಕಡ ಸಹಯೋಗದೊಂದಿಗೆ ಸರ್ಕಾರಿ ಪ್ರೌಢಶಾಲೆ ಗುಂಡ್ಮಿ ಸಂಯೋಜನೆಯೊಂದಿಗೆ ಪರಿಸರ ಜಾಗೃತಿ ಕಾರ್ಯಾಗಾರ 11ರ ಮಾಲಿಕೆ ಕಾರ್ಯಕ್ರಮ ಶನಿವಾರ ಉದ್ಘಾಟಿಸಿಮಾತನಾಡಿದರು.
ಗುಂಡ್ಮಿ ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಸತೀಶ್ ಐತಾಳ್ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ತಜ್ಞ ಗಣೇಶ್ ಜಿ.ಚಲ್ಲಮಕ್ಕಿ, ಪಂಚವರ್ಣ ಯುವಕ ಮಂಡಲ ಅಧ್ಯಕ್ಷ ಅಜಿತ್ ಆಚಾರ್, ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ಕಾರ್ಯದರ್ಶಿ ಚಂದ್ರ ಪೂಜಾರಿ, ಎಸ್‌ಡಿಎಂಸಿ ಅಧ್ಯಕ್ಷ ರಾಘವೇಂದ್ರ, ಗೆಳೆಯರು ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ, ಸಾಲಿಗ್ರಾಮ ಪಪಂ ಸದಸ್ಯ ರವೀಂದ್ರ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.
ಪಂಚವರ್ಣ ಮಹಿಳಾ ಮಂಡಲ ಕಾರ್ಯಾಧ್ಯಕ್ಷೆ ಎ.ಕಲಾವತಿ ಅಶೋಕ್ ಸ್ವಾಗತಿಸಿದರು. ಸಂಚಾಲಕಿ ಸುಜಾತಾ ಬಾಯರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಧ್ಯಕ್ಷ ರವೀಂದ್ರ ಕೋಟ ವಂದಿಸಿದರು.