

ಅಳವಂಡಿ: ಪ್ರತಿಯೊಬ್ಬರೂ ಪರಿಸರ ರಕ್ಷಣೆಗೆ ಪಣ ತೊಡಬೇಕು ಎಂದು ಅಂಗನವಾಡಿ ಕಾರ್ಯಕರ್ತೆ ಮರಿಬಸಮ್ಮ ಕರ್ಕಿಹಳ್ಳಿ ತಿಳಿಸಿದರು.
ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಉದ್ಘಾಟನೆ ಅಂಗವಾಗಿ ಅಂಗನವಾಡಿ ಮಕ್ಕಳ ತಾಯಂದಿರಿಂದ ತಾಯಿಯ ಹೆಸರಲ್ಲಿ ಒಂದು ಗಿಡ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಗಿಡ ನೆಡುವ ಕಾರ್ಯಕ್ಕೆ ಚಾಲನೆ ನೀಡಿ ಶನಿವಾರ ಮಾತನಾಡಿದರು.
ನಿತ್ಯ ವಾಹನಗಳು ಹೆಚ್ಚಾಗುತ್ತಿವೆ. ಇದರಿಂದ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ. ಪ್ಲಾಸ್ಟಿಕ್ ಬಳಕೆ ಜಾಸ್ತಿಯಾಗುತ್ತಿದ್ದು, ಇದರಿಂದ ವಾಯು ಮಾಲಿನ್ಯ, ಉಷ್ಣಾಂಶ ಹೆಚ್ಚಾಗುತ್ತಿದೆ. ಸಮತೋಲನ ಕಾಪಾಡಲು ಪರಿಸರದ ಬಗ್ಗೆ ಜಾಗೃತಿ ವಹಿಸಬೇಕಾಗಿದೆ ಎಂದರು.