ಹುಬ್ಬಳ್ಳಿ: ಗೋಕುಲ ರಸ್ತೆಯ ಡಾ. ಕೆ. ಎಸ್. ಶರ್ಮಾ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನ ಸಂಸ್ಥೆಯಲ್ಲಿ ಜೂ. 22ರಂದು ಮಧ್ಯಾಹ್ನ 12 ಗಂಟೆಗೆ ಉಚಿತ ಪ್ರಕೃತಿ ಚಿಕಿತ್ಸೆ ಸಲಹಾ ಶಿಬಿರ ಏರ್ಪಡಿಸಲಾಗಿದೆ.
ಮಧ್ಯಾಹ್ನ 12ರಿಂದ 1.30ರವರೆಗೆ ಪ್ರಕೃತಿ ಚಿಕಿತ್ಸೆಯ ಮಹತ್ವದ ಕುರಿತು ಉಪನ್ಯಾಸ, ಬಳಿಕ ಆರೋಗ್ಯ ಸಮಸ್ಯೆಗಳಿಗೆ ಉಚಿತ ಸಲಹೆ ನೀಡಲಾಗುವುದು. ಮಧುಮೇಹ, ಕ್ರಾನಿಕ್ ಅಸ್ತಮಾ, ಸಂಧಿವಾತ, ಬೊಜ್ಜು, ಪಾರ್ಶ್ವವಾಯು, ಚರ್ಮರೋಗ, ಕಿಡ್ನಿ ಸ್ಟೋನ್, ಗಾಲ್ ಬ್ಲಾಡರ್ ಸ್ಟೋನ್ ಅಥವಾ ಯಾವುದೇ ಇತರ ರೋಗ ಪೀಡಿತರು ಪಾಲ್ಗೊಳ್ಳಬಹುದು ಎಂದು ಸಂಸ್ಥೆಯ ಸಂಸ್ಥಾಪಕ ಡಾ. ಕೆ. ಎಸ್. ಶರ್ಮಾ ತಿಳಿಸಿದ್ದಾರೆ.