ಯಲ್ಲಾಪುರದಲ್ಲಿ ನಾಟ್ಯ ವಂದನಾ ಕಾರ್ಯಕ್ರಮ

BHARATHNATYA
Published on

ಯಲ್ಲಾಪುರ: ಭಾರತಿ ನೃತ್ಯ ಕಲಾ ಕೇಂದ್ರ ಸಮಿತಿ ಯಲ್ಲಾಪುರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರವಾರ ಆಶ್ರಯದಲ್ಲಿ ನಾಟ್ಯ ವಂದನಾ ಕಾರ್ಯಕ್ರಮ ಪಟ್ಟಣದ ಗ್ರಾಮದೇವಿ ದೇವಸ್ಥಾನದ ರಂಗಮಂದಿರದಲ್ಲಿ ಜ. 14 ರಂದು ಸಂಜೆ 4.30ಕ್ಕೆ ನಡೆಯಲಿದೆ.
ಶಾಸಕ ಶಿವರಾಮ ಹೆಬ್ಬಾರ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಶ್ವದರ್ಶನ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ಅಧ್ಯಕ್ಷತೆ ವಹಿಸುವರು. ಡಿಸಿಎಫ್ ಎಸ್.ಜಿ. ಹೆಗಡೆ, ಭಾರತ ಸೇವಾದಳದ ಅಧ್ಯಕ್ಷ ಎಂ.ಆರ್. ಹೆಗಡೆ ಕುಂಬ್ರಿಗುಡ್ಡೆ, ಪಿಎಲ್​ಡಿ ಬ್ಯಾಂಕ್ ಅಧ್ಯಕ್ಷ ಆರ್.ಎಸ್. ಭಟ್ಟ, ಸುಜ್ಞಾನ ಸೇವಾ ಫೌಂಡೇಷನ್ ಅಧ್ಯಕ್ಷ ಜಿ.ಎನ್. ಭಟ್ಟ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ರಾಮಚಂದ್ರ ಕೆ., ಗ್ರಾಮದೇವಿ ದೇವಸ್ಥಾನದ ಅಧ್ಯಕ್ಷ ರಾಜೇಂದ್ರಪ್ರಸಾದ ಭಟ್ಟ, ಇತರರು ಭಾಗವಹಿಸುವರು. ನಾಟ್ಯವಂದನಾ ಶಾಸ್ತ್ರೀಯ ನೃತ್ಯ ಕಾರ್ಯಕ್ರಮದಲ್ಲಿ ನಟವಾಂಗದಲ್ಲಿ ವಿದುಷಿ ಸುಮಾ ವೆಂಕಟರಮಣ, ಹಾಡುಗಾರಿಕೆಯಲ್ಲಿ ವಾಣಿ ಉಡುಪಿ, ಮೃದಂಗದಲ್ಲಿ ಡಾ. ಗೋಪಿಕೃಷ್ಣ, ವಯೋಲಿನ್​ನಲ್ಲಿ ಶಂಕರ ಕಬಾಡಿ, ರಿದಂ ಪ್ಯಾಡ್​ನಲ್ಲಿ ರಾಘವೇಂದ್ರ ರಂಗದೋಳ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟಕ ವಿ.ಟಿ. ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net