ನಾಟ್ಯಾಂಜಲಿ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

17 gkp 06
ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳು.
Published on

ಗೋಣಿಕೊಪ್ಪ: ಕರ್ನಾಟಕ ಸ್ಪೋರ್ಟ್ಸ್ ಡಾನ್ಸ್ ಅಸೋಸಿಯೇಷನ್ ಹಾಗೂ ಏಷ್ಯಾನ್ ಸ್ಪೋರ್ಟ್ಸ್ ಡಾನ್ಸ್ ಕೌನ್ಸಿಲ್ ವತಿಯಿಂದ ಮಂಡ್ಯದ ಅಂಬೇಡ್ಕರ್ ಭವನದಲ್ಲಿ ಇತ್ತಿಚೆಗೆ ಆಯೋಜಿಸಿದ್ದ ರಾಜ್ಯ ಮಟ್ಟದ ಸ್ಪೋರ್ಟ್ಸ್ ಡಾನ್ಸ್ ಚಾಂಪಿಯನ್‌ಷಿಪ್‌ನಲ್ಲಿ ಕೊಡಗಿನ ವಿರಾಜಪೇಟೆಯ ನಾಟ್ಯಾಂಜಲಿ ನೃತ್ಯ ಹಾಗೂ ಸಂಗೀತ ಸಂಸ್ಥೆಯ 56 ವಿದ್ಯಾರ್ಥಿಗಳು ಪ್ರಶಸ್ತಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸೋಲೋ, ಡಬಲ್ಸ್ ಹಾಗೂ ಗ್ರೂಪ್ ಡಾನ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಒಟ್ಟು 62 ಚಿನ್ನ, 32 ಬೆಳ್ಳಿ, 6 ಕಂಚು ಸೇರಿದಂತೆ ಒಟ್ಟು 100 ಪದಕಗಳನ್ನು ಪಡೆದು ಚಾಂಪಿಯನ್ ಪಟ್ಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಫೆ. 7ರಿಂದ ಜಮ್ಮು-ಕಾಶ್ಮೀರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಚಾಂಪಿಯನ್‌ಶಿಪ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net