ಮಂಚೇಗೌಡನ ಕೊಪ್ಪಲಿನಲ್ಲಿ ದೇಗುಲ ಉದ್ಘಾಟನೆ

15
Published on

ಮೈಸೂರು: ಮಂಚೇಗೌಡನಕೊಪ್ಪಲು ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಂಚೇಗೌಡನ ಕೊಪ್ಪಲಿನ ಅರಳಿಮರದ ವೃತ್ತದಲ್ಲಿ ಮಂಗಳವಾರ ಶ್ರೀ ವರಸಿದ್ಧಿ ವಿನಾಯಕ ಹಾಗೂ ನವಗ್ರಹ ಪ್ರತಿಷ್ಠಾಪನಾ ಮಹೋತ್ಸವ ಮತ್ತು ಶ್ರೀ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಶ್ರೀ ವಿನಾಯಕ ದೇವಸ್ಥಾನದ ಗೋಪುರ ಕಳಸ ಪ್ರತಿಷ್ಠಾಪನೆ ಮಾಡಿದರು. ಬಳಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಗಳು, ಬೌದ್ಧಿಕ ಮತ್ತು ಆಧ್ಯಾತ್ಮಿಕ ವಿಷಯಗಳ ಬಗ್ಗೆ ತಿಳಿಸಿದರು. ಜತೆಗೆ ಶ್ರೀರಾಮ ಮತ್ತು ಶಿವನ ವಿಚಾರಗಳನ್ನು ಭಕ್ತರಿಗೆ ತಿಳಿಸಿಕೊಟ್ಟರು.


ಮೈಸೂರು ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ಶಾಸಕ ಎಲ್.ನಾಗೇಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಮಾದೇಗೌಡ, ವಿದ್ಯಾವಿಕಾಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕವೀಶ್‌ಗೌಡ, ಕೆಪಿಸಿಸಿ ಸದಸ್ಯ ಕೆ.ಹರೀಶ್‌ಗೌಡ, ನಗರಪಾಲಿಕೆ ಮಾಜಿ ಸದಸ್ಯ ಶಿವಣ್ಣ, ಸಂಘದ ಅಧ್ಯಕ್ಷ ಡಿ.ರಾಮಚಂದ್ರು, ಕಾರ್ಯದರ್ಶಿ ಎನ್.ರವಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net