ಅ.3 ರಂದು ನವ ಸಂಕಲ್ಪ, ನವ ಸಿಂಧನೂರು ಪಾದಯಾತ್ರೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಹೇಳಿಕೆ

Basanagouda Badarli KPCC General Secretary
ಬಸನಗೌಡ ಬಾದರ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ.
Published on

ಸಿಂಧನೂರು: ಅ.3 ರಂದು ನವ ಸಂಕಲ್ಪ, ನವ ಸಿಂಧನೂರು ಹೆಸರಿನಡಿ ನಗರದ ನಿಲ್ದಾಣ ಬಳಿಯ ಅಂಬಾದೇವಿ ದೇವಸ್ಥಾನದಿಂದ ತಾಲೂಕಿನ ಅಂಬಾಮಠದ ಅಂಬಾದೇವಿ ದೇವಸ್ಥಾನದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರೈತರ ಬೆಳೆಗೆ ವೈಜ್ಞಾನಿಕ ಬೆಲೆ ಹಾಗೂ ಮುಕ್ತ ಮಾರುಕಟ್ಟೆ ಕಲ್ಪಿಸುವುದು. ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸುವುದು. ಯುವಕ, ಯುವತಿಯರಿಗೆ ಉದ್ಯೋಗ ನೀಡುವುದು. ಸಿಂಧನೂರನ್ನು ಜಿಲ್ಲಾ ಕೇಂದ್ರವಾಗಿಸಲು ಕ್ರಮಕೈಗೊಳ್ಳುವುದು. ಮಹಿಳೆಯರ ಸ್ವಾವಲಂಬಿ ಬದುಕಿಗೆ ಯೋಜನೆ ಜಾರಿಗೊಳಿಸುವುದು. ಜನರ ನಾನಾ ಸಮಸ್ಯೆಗಳಿಗೆ ಮುಕ್ತಿ ನೀಡಬೇಕೆಂಬ ಉದ್ದೇಶದೊಂದಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.

ತಾಲೂಕಿಗೆ ಮೆಡಿಕಲ್, ಡಿಪ್ಲೊಮಾ, ಕಾನೂನು ಮಹಾವಿದ್ಯಾಲಯ ಹಾಗೂ ಇತರ ವೃತ್ತಿಪರ ಕೋರ್ಸ್‌ಗಳನ್ನು ಮಂಜೂರು ಮಾಡುವಲ್ಲಿ ಸರ್ಕಾರ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ಎಲ್ಲ ಅರ್ಹತೆ ಇದ್ದರೂ ಅವಕಾಶ ಸಿಗದಿರುವುದು ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆ ಕಾರಣವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net