ದೈಹಿಕ, ಮಾನಸಿಕವಾಗಿ ಸದೃಢರಾಗಿ...

Police Shibhira
Published on

ಎಸ್ಪಿ ಹರಿರಾಂ ಶಂಕರ್​ ಕಿವಿಮಾತು

'ನವಚೇತನ' ಶಿಬಿರ ಉದ್ಘಾಟನೆ

ವಿಜಯವಾಣಿ ಸುದ್ದಿಜಾಲ ಉಡುಪಿ

ಪೊಲೀಸ್​ ಕರ್ತವ್ಯದಲ್ಲಿ ದೈಹಿಕ, ಮಾನಸಿಕ ಶಕ್ತಿಯ ಅಗತ್ಯಯತೆ ಇರುತ್ತದೆ. ಆ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ಪೊಲೀಸ್​ ಅಧಿಕಾರಿ, ಸಿಬ್ಬಂದಿಯಲ್ಲಿ ಆಯ್ದ 90 ಮಂದಿಗೆ ಉತ್ತಮವಾದ ಆರೋಗ್ಯ ಹೊಂದಲು ಮತ್ತು ದೈಹಿಕ, ಮಾನಸಿಕವಾಗಿ ಸದೃಢವಾಗಿರಲು 30 ದಿನಗಳ ನವಚೇತನ ಉಚಿತ ಶಿಬಿರ ಆಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠ ಹರಿರಾಂ ಶಂಕರ್​ ತಿಳಿಸಿದರು.

ಉಡುಪಿಯ ಆತ್ರಾಡಿಯಲ್ಲಿರುವ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ 'ಸೌಖ್ಯವನ' ಪರೀಕದಲ್ಲಿ ಜುಲೈ 1ರಂದು ಬೆಳಗ್ಗೆ ಆಯೋಜಿಸಿದ್ದ ಆರೋಗ್ಯ ಶಿಬಿರ ನವಚೇತನ ಉದ್ಘಾಟಿಸಿ ಮಾತನಾಡಿದರು.

ಧರ್ಮಸ್ಥಳದ ಶಾಂತಿವನ ಟ್ರಸ್ಟ್​ (ರಿ.)ನ ಕಾರ್ಯದರ್ಶಿ ಸಿ.ಸೀತಾರಾಮ ತೋಳ್ಪಡಿತ್ತಾಯ, ಉಡುಪಿ ಆದರ್ಶ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ಶ್ರೀಕಾಂತ ಕೆ., ಜಿಲ್ಲಾ ಯುವ ಸಬಲೀಕರಣ ಇಲಾಖೆಯ ದೈಹಿಕ ತರಬೇತುದಾರ ಉಮೇಶ ಮಟ್ಟು, ಉಡುಪಿ ಬುಡೋಕಾನ್​ ಮತ್ತು ಮಾರ್ಷಲ್​ ಆರ್ಟ್ಸ್​ ಸಂಸ್ಥೆಯ ಶಿಹಾನ್​ ಸಂತೋಷ ಶೆಟ್ಟಿ, ಸೌಖ್ಯವನದ ಮುಖ್ಯ ವೈದ್ಯಾಧಿಕಾರಿ ಡಾ. ಗೋಪಾಲ ಪೂಜಾರಿ, ಕೋರಿಯೋಗ್ರಾಫರ್​ ಮಂಜಿತ್​ ಶೆಟ್ಟಿ ಇತರರು ಉಪಸ್ಥಿತರಿದ್ದರು.

ಆಸ್ಪತ್ರೆಯ ವ್ಯವಸ್ಥಾಪಕ ಪ್ರವೀಣಕುಮಾರ್​ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಪೊಲೀಸ್​ ಕ್ಷೇಮಾಭಿವೃದ್ಧಿ ಅಧಿಕಾರಿ ರೋಹಿತ ನಾಯಕ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net