

ಬೆಳ್ತಂಗಡಿ: ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನಮ್ನ ಪ್ರತಿಷ್ಠಾಪನಾ ಜಾತ್ರೋತ್ಸವದ ಅಂಗವಾಗಿ ಕ್ಷೇತ್ರದ ಪೀಠಾಧೀಶ 1008 ಮಹಾಮಂಡಲೇಶ್ವರ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ನೇತೃತ್ವದಲ್ಲಿ ನವಗ್ರಹ ಶಾಂತಿ ಹೋಮ, ನವಗ್ರಹಗಳಿಗೆ ವಿಶೇಷ ಪೂಜೆ ವೈದಿಕ ವಿಧಿ-ವಿಧಾನಗಳೊಂದಿಗೆ ನಡೆಯಿತು.
ರಾತ್ರಿ ಶ್ರೀರಾಮ ದೇವರ ರಜತ ಪಾಲಕಿ ಉತ್ಸವ, ಮಹಾ ಮೃತ್ಯುಂಜಯ ಹೋಮ, ಅನ್ನಪೂರ್ಣೇಶ್ವರಿ ದೇವಿಗೆ ಮಹಾಪೂಜೆ, ನಾಗ ದೇವರಿಗೆ ಪಂಚಾಮೃತ ಅಭಿಷೇಕ, ರಾತ್ರಿ ಶ್ರೀ ಅನ್ನಪೂರ್ಣೇಶ್ವರಿ ದೇವಿಯ ಬಲಿ ಉತ್ಸವ, ಪುಷ್ಪ ರಥೋತ್ಸವ ನಡೆಯಿತು.