ಮಲಪ್ರಭಾ ಕಾಲುವೆಗೆ ನೀರು ಹರಿಸಲು ಒತ್ತಾಯ

17-nlg- malaprabha
Published on

ನವಲಗುಂದ: ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿವೆ. ಬೆಳೆ ಉಳಿಸಿಕೊಳ್ಳಲು ಕೂಡಲೇ ಮಲಪ್ರಭಾ ಕಾಲುವೆ ಮೂಲಕ ನೀರು ಹರಿಸಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಶರಣಪ್ಪಗೌಡ ದಾನಪ್ಪಗೌಡರ ಒತ್ತಾಯಿಸಿದರು.
ಪ್ರತಿಕಾ ಪ್ರಕಟಣೆ ನೀಡಿರುವ ಅವರು, ಸದ್ಯ ನೀರಿನ ಅವಶ್ಯಕತೆಯಿದ್ದು, ಮಲಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸಬೇಕು. ಈ ಜುರಿತು ಮಲಪ್ರಭಾ ನೀರಾವರಿ ಯೋಜನೆಯ ಸಲಹಾ ಮಂಡಳಿ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ ಅವರಿಗೆ ಒತ್ತಾಯ ಮಾಡುತ್ತೇನೆ. ಸದ್ಯ ಡ್ಯಾಮ್‌ನಲ್ಲಿ 16.5 ಟಿಎಂಸಿ ನೀರಿನ ಸಂಗ್ರಹದ ಮಾಹಿತಿಯಿದೆ. 4 ರಿಂದ 5 ಟಿಎಂಸಿ ನೀರು ಹರಿಸಲು ಯಾವುದೇ ತೊಂದರೆ ಇಲ್ಲ. ಮುಂದೆ ಕುಡಿಯುವ ನೀರಿಗೂ ಸಮಸ್ಯೆ ಆಗುವುದಿಲ್ಲ. ಆದ್ದರಿಂದ ಮಲಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net