ನವನಗರ ಕಾಳಿಕಾ ದೇವಸ್ಥಾನದಲ್ಲಿ ಕಾರ್ತಿಕೋತ್ಸವ

IMG-20241205-WA0009-1.jpg
Published on

ಹುಬ್ಬಳ್ಳಿ: ಇಲ್ಲಿಯ ನವನಗರ ಪಂಚಾಕ್ಷರಿ ನಗರದ ಶ್ರೀ ಕಾಳಿಕಾ ದೇವಸ್ಥಾನದಲ್ಲಿ ಇತ್ತೀಚೆಗೆ ಕಾರ್ತಿಕೋತ್ಸವ ಸಂಭ್ರಮದಿಂದ ಜರುಗಿತು.

ದೀಪೋತ್ಸವದ ಅಂಗವಾಗಿ ದಾನಿಗಳಿಗೆ ಸನ್ಮಾನ ಹಾಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ಪಾಳೆ ವಜ್ರಹಸ್ತ ಮಠದ ಶ್ರೀ ರಾಜರಾಜೇಶ್ವರ ಚೈತನ್ಯ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜ್ಞಾನದ ಸಂಕೇತವಾದ ದೀಪವು ನಮ್ಮ ದೇವತಾರಾಧನೆ ಹಾಗೂ ಧಾರ್ಮಿಕ ಪರಂಪರೆಯಲ್ಲಿ ಬಹಳ ಮಹತ್ವದ ಸ್ಥಾನ ಪಡೆದಿದೆ. ಧರ್ಮ ಮಾರ್ಗದಲ್ಲಿ ನಡೆದಲ್ಲಿ ಸುಖ, ಶಾಂತಿ - ಸಮೃದ್ಧಿ ಅರಸಿಕೊಂಡು ಬರುತ್ತವೆ. ಇಂದಿನ ಧಾರ್ಮಿಕ ಹಾಗೂ ಸಾಮಾಜಿಕ ವಿಷಮ ಸ್ಥಿತಿಯಲ್ಲಿ ಪಾಲಕರು ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಿ, ಧಾಮಿರ್ಕ ಪ್ರಜ್ಞೆ ಬೆಳೆಸಬೇಕು ಎಂದು ಹೇಳಿದರು.

ವಿಶ್ವಕರ್ಮ ವಿಕಾಸ ಸಮಿತಿ ಟ್ರಸ್ಟ್ ಅಧ್ಯಕ್ಷ ಸಿ.ಪಿ. ಮಾಯಾಚಾರಿ ಅಧ್ಯಕ್ಷತೆ ವಹಿಸಿದ್ದರು. ವಿಶ್ವಚೇತನ ಮಹಿಳಾ ಮಂಡಳದ ಮೀನಾಕ್ಷಿ ಬಡಿಗೇರ, ವಿಶ್ವಕರ್ಮ ಯುವಕ ಸಂಘದ ಅಧ್ಯಕ್ಷ ಮೌನೇಶ್ವರ ರಟ್ಟಿಹಳ್ಳಿ, ಪದಾಧಿಕಾರಿಗಳು, ಸದಸ್ಯರು ಭಕ್ತರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net