ನವನಗರದಲ್ಲಿ ಶ್ರೀ ರಾಘವೇಂದ್ರಸ್ವಾಮಿ ರಥೋತ್ಸವ

IMG-20250812-WA0025-1.jpg
Published on

ಹುಬ್ಬಳ್ಳಿ: ಇಲ್ಲಿನ ನವನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ರಾಯರ 354ನೇ ಆರಾಧನಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.

ಉತ್ತರಾರಾಧನೆ ನಿಮಿತ್ತ ಮಂಗಳವಾರ ಬೆಳಗ್ಗೆ ಸುಪ್ರಭಾತ, ಅಷ್ಟೋತ್ತರ ಪಾರಾಯಣ, ರಾಯರ ವೃಂದಾವನಕ್ಕೆ ಪಂಚಾಮೃತ ಅಭಿಷೇಕ, ರಥಾಂಗ ಹೋಮ ಮುಂತಾದ ಧಾರ್ಮಿಕ ಕಾರ್ಯಗಳು ನಡೆದವು.

ಉತ್ತರಾರಾಧನೆ ನಿಮಿತ್ತ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪುಷ್ಪ ಹಾಗೂ ತುಳಸಿ ಮಾಲೆಗಳಿಂದ ರಾಯರ ವೃಂದಾವನ ಅಲಂಕರಿಸಲಾಗಿತ್ತು.

ಭಕ್ತರು ರಥೋತ್ಸವವನ್ನು ಸಡಗರದಿಂದ ನೆರವೇರಿಸಿದರು. ಮಧ್ಯಾಹ್ನ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ಧಾರವಾಡದ ಐಶ್ವರ್ಯ ದೇಸಾಯಿ ಅವರಿಂದ ಸಂಜೆ ಸುಗಮ ಸಂಗೀತ ಕಾರ್ಯಕ್ರಮ ನಡೆಯಿತು.
ಶ್ರೀ ರಾಘವೇಂದ್ರ ಭಕ್ತ ಮಂಡಳಿಯ ಅಧ್ಯಕ್ಷ ನಾರಾಯಣರಾವ ನವಲಿ, ಉಪಾಧ್ಯಕ್ಷ ದಿನೇಶ ಮಾಸೂರಕರ, ಕಾರ್ಯದರ್ಶಿ ಪಿ.ಎಸ್. ನರಸಾಪೂರ ಮುಂತಾದವರು ನೇತೃತ್ವ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net