ಪರಂಪರೆ, ಸಂಸ್ಕೃತಿ ಮುಂದಿನ ಪೀಳಿಗೆಗೆ : ಕ್ಯಾ.ಗಣೇಶ್ ಕಾರ್ಣಿಕ್ ಸಲಹೆ

dasara
Published on

ಕಾಸರಗೋಡು: ಪರಂಪರೆ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ನಿಟ್ಟಿನಲ್ಲಿ ಪಾಲಕರು ಅರಿವು ಮೂಡಿಸಬೇಕು ಎಂದು ಕರ್ನಾಟಕ ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಕ್ಯಾ.ಗಣೇಶ್ ಕಾರ್ಣಿಕ್ ತಿಳಿಸಿದರು.
ಕಾಸರಗೋಡಿನ ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಅಂಗವಾಗಿ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಸಾಹಿತ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಾರ್ನಾಡು ಪದ್ಮನಾಭ ತಂತ್ರಿ ದೀಪ ಪ್ರಜ್ವಲಿಸಿದರು. ಕಾಸರಗೋಡು ಮಲ್ಲಿಕಾರ್ಜುನ ಕ್ಷೇತ್ರದ ಆಡಳಿತ ಸಮಿತಿ ಸದಸ್ಯ ಡಾ.ಕೆ.ಎನ್. ವೆಂಕಟ್ರಮಣ ಹೊಳ್ಳ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಧಾರ್ಮಿಕ ಮುಖಂಡ ಅರಿಬೈಲ್ ಗೋಪಾಲ ಶೆಟ್ಟಿ, ಶ್ರೀಧರ ಶೆಟ್ಟಿ ಮುಟ್ಟಂ, ನಿವೃತ್ತ ಶಿಕ್ಷಕ ವಿಶಾಲಾಕ್ಷ ಪುತ್ರಕಳ, ನಗರಸಭಾ ಸದಸ್ಯೆ ಸವಿತಾ, ಸಂಧ್ಯಾರಾಣಿ, ಪತ್ರಕರ್ತರಾದ ಪ್ರದೀಪ್ ಬೇಕಲ್, ಗಂಗಾಧರ ಯಾದವ್, ಜಗನ್ನಾಥ ಪಿ.ಕೆ, ಜಯ ಮಣಿಯಂಪಾರೆ ಉಪಸ್ಥಿತರಿದ್ದರು.

ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಭಜನಾ ಗಾಯನೋತ್ಸವಕ್ಕೆ ಚಾಲನೆ ನೀಡಿದರು. ಕೆ.ವಾಮನ ರಾವ್ ಬೇಕಲ್ ಸ್ವಾಗತಿಸಿದರು. ಜಗದೀಶ್ ಕೂಡ್ಲು ಕಾರ್ಯಕ್ರಮ ನಿರೂಪಿಸಿದರು. ವಸಂತ ಕೆರೆಮನೆ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net