ನವೋದಯ ಟ್ರಸ್ಟ್‌ನಿಂದ ವಿಮೆ ಚೆಕ್ ವಿತರಣೆ

mng-31may-navodaya
Published on




ಮಂಗಳೂರು : ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಪ್ರಾಯೋಜಿತ ನವೋದಯ ಸ್ವಸಹಾಯ ಸಂಘದ ಸದಸ್ಯೆ ವಿದ್ಯಾಲಕ್ಷ್ಮಿ ಅವರು ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದು ಅವರ ಕುಟುಂಬದ ವಾರಿಸುದಾರರಿಗೆ ಸಂಸ್ಥೆಯ ಆಡಳಿತ ಟ್ರಸ್ಟಿ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ವಿಮೆ ಚೆಕ್ ವಿತರಣೆ ಮಾಡಿದರು.
ಮಂಗಳೂರು ತಾಲೂಕಿನ ಬಜಪೆ ಕಿನ್ನಿಕಂಬಳ ಗ್ರಾಮದ ಜ್ಯೋತಿ ನವೋದಯ ಸ್ವಸಹಾಯ ಸಂಘದ ಸದಸ್ಯೆ ವಿದ್ಯಾಲಕ್ಷ್ಮಿ ಅವರು ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತ ಪಟ್ಟಿದ್ದರು.ಮೃತರ ಮಗ ಉದಯ ಆರ್. ರಾವ್ ಅವರಿಗೆ ಚೈತನ್ಯ ಸ್ವಸಹಾಯ ಆರೋಗ್ಯ ವಿಮಾ ಯೋಜನೆಯ ಒಂದು ಲಕ್ಷ ರೂ. ಮೊತ್ತದ ಚೆಕ್ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ವಿತರಿಸಿದರು. ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್‌ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net