ಸಿಬಿಎಸ್‌ಇ ಫಲಿತಾಂಶದಲ್ಲಿ ನವೋದಯ ಸಾಧನೆ

bhr muktha
ಮುಕ್ತಾ
Published on

ಬಾಳೆಹೊನ್ನೂರು: ಪ್ರಸಕ್ತ ಸಾಲಿನ ಸಿಬಿಎಸ್‌ಇ ಫಲಿತಾಂಶದಲ್ಲಿ ಸೀಗೋಡು ಜವಾಹರ ನವೋದಯ ವಿದ್ಯಾಲಯದ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ ಎಂದು ವಿದ್ಯಾಲಯದ ಪ್ರಾಚಾರ್ಯ ಆರ್.ಪ್ರೇಮ್‌ಕುಮಾರ್ ತಿಳಿಸಿದ್ದಾರೆ.

10ನೇ ತರಗತಿಗೆ ಶೇ.85.10 ಮತ್ತು 12ನೇ ತರಗತಿಗೆ ಶೇ.81.79 ಫಲಿತಾಂಶ ಬಂದಿದೆ. ಎಸ್‌ಎಸ್‌ಎಲ್‌ಸಿ 80 ವಿದ್ಯಾರ್ಥಿಗಳಲ್ಲಿ 28 ವಿದ್ಯಾರ್ಥಿಗಳು ಶೇ.90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. 10ನೇ ತರಗತಿ ಮುಕ್ತಾ ಶೇ.97.20 ಫಲಿತಾಂಶ ಮತ್ತು 12ನೇ ತರಗತಿ ರಂಜನಾ ರಾಜ್ ಶೇ.94.80 ಫಲಿತಾಂಶ ಪಡೆದುಕೊಳ್ಳುವ ಮೂಲಕ ವಿದ್ಯಾಲಯದ ಟಾಪರ್ ಆಗಿ ಹೊರಹೊಮ್ಮಿದ್ದಾರೆ. 10ನೇ ತರಗತಿ ಕನ್ನಡ ವಿಭಾಗದಲ್ಲಿ 6 ವಿದ್ಯಾರ್ಥಿಗಳು ಮತ್ತು ಗಣಿತದಲ್ಲಿ ಒಬ್ಬರು 100ಕ್ಕೆ 100 ಅಂಕ ಪಡೆದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net