

ಕಾರ್ಕಳ: ನವೋದಯ ಸ್ವಸಹಾಯ ಸಂಘವು ಕಾರ್ಕಳದಲ್ಲೇ ಮೊದಲು ಆರಂಭಗೊಂಡಿದ್ದು, ಪ್ರಸ್ತುತ ಈ ಸಂಘ ದೇಶಕ್ಕೇ ಮಾದರಿಯಾಗಿ ಗುರುತಿಸಲ್ಪಟ್ಟಿದೆ. ನವೋದಯ ಸ್ವಸಹಾಯ ಸಂಘದ ರಜತ ಮಹೋತ್ಸವ ಮೇ10ರಂದು ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯಲಿದೆ ಎಂದು ದ.ಕ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಹೇಳಿದರು.
ಕಾರ್ಕಳದ ದಾನಶಾಲೆ ಬಾಹುಬಲಿ ಪ್ರವಚನ ಮಂದಿರದಲ್ಲಿ ಶನಿವಾರ ನವೋದಯ ಸ್ವಸಹಾಯ ಸಂಘದ ರಜತ ಮಹೋತ್ಸವ ಪೂರ್ವಭಾವಿ ಸಭೆ ಉದ್ಘಾಟಿಸಿ ಮಾತನಾಡಿದರು.
ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಟ್ರಸ್ಟಿ ಮೇಘರಾಜ್ ರಾಜೇಂದ್ರ ಕುಮಾರ್, ಸುನೀಲ್ ಬಜಗೋಳಿ ಉಪಸ್ಥಿತರಿದ್ದರು. ದೇವಿಪ್ರಸಾದ್ ಶೆಟ್ಟಿ ಪ್ರಸ್ತಾವನೆಗೈದರು. ಪೂರ್ಣಿಮಾ ವಂದಿಸಿದರು.