

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಶ್ರೀ ಕ್ಷೇತ್ರ ಮಂಗಳಗಿರಿ, ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಅ.3 ರಿಂದ ಅ.11ರವರೆಗೆ ವಿವಿಧ ಧಾರ್ಮಿಕ ಹಾಗೂ ವಿವಿಧ ಭಜನಾ ಮಂಡಳಿಗಳ ಭಜನಾ ಕಾರ್ಯಕ್ರಮಗಳೊಂದಿಗೆ ಆಡಳಿತ ಮೊಕ್ತೇಸರ ರಾಜೀವ ನೇತೃತ್ವದಲ್ಲಿ ನಡೆಯಿತು.
ನವಕಲಶ ಪ್ರಧಾನ ಗಣಹೋಮ, ಶ್ರೀದೇವಿ ನಾಗಂಬಿಕಾ ಅಮ್ಮನವರಿಗೆ ಪಂಚಾಮೃತ ಅಭಿಷೇಕ, ತೆನೆ ತುಂಬಿಸುವುದು, ರಾತ್ರಿ ನಾಗಾಂಬಿಕಾ ಭಜನಾ ಮಂಡಳಿಯ ಸದಸ್ಯರಿಂದ ಕುಣಿತಾ ಭಜನಾ ಕಾರ್ಯಕ್ರಮ, ಉದ್ಭವ ಗಣಪತಿ ಮತ್ತು ಶ್ರೀ ದೇವಿ ನಾಗಂಬಿಕಾ ಅಮ್ಮನವರಿಗೆ ಜೋಡುರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಆಯುಧ ಪೂಜೆ, ರಾತ್ರಿ ನಾಗಾಂಬಿಕಾ ಭಜನಾ ಮಂಡಳಿಯವರಿಂದ ಕುಣಿತ ಭಜನಾ ಕಾರ್ಯಕ್ರಮ, 9 ಮುತ್ತೈದೆಯರಿಗೆ ಬಾಗಿನ ಸಮರ್ಪಣೆ, ಬಳಿಕ ಉದ್ಭವ ಮಹಾಗಣಪತಿಗೆ ಮತ್ತು ಶ್ರೀ ದೇವಿ ನಾಗಾಂಬಿಕಾ ಅಮ್ಮನವರಿಗೆ ಜೋಡಿ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಮಹಾಪೂಜೆ, ವರಾಹಿಮಂತ್ರಮೂರ್ತಿ, ನಾಗಕಲ್ಲುರ್ಟಿ, ಸತ್ಯದೇವತೆ, ದೈವರಾಜ ಗುಳಿಗ, ಕೊರಗಜ್ಜ ದೈವಗಳಿಗೆ ಹರಕೆ ಕೋಲ ನಡೆಯಿತು.