ವಾಲ್ಮೀಕಿ ಜಯಂತಿ ಬಹಿಷ್ಕರಿಸುವ ಎಚ್ಚರಿಕೆ ನೀಡಿದ ನಾಯಕ ಸಮುದಾಯ

Valmiki Sri
Published on

ಮೈಸೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೀಸಲಾತಿ ಹೆಚ್ಚಿಸಲು ಸರ್ಕಾರ ಕ್ರಮ ವಹಿಸದೆ ಇದ್ದರೆ ಸರ್ಕಾರದ ವತಿಯಿಂದ ಆಚರಿಸುವ ವಾಲ್ಮೀಕಿ ಜಯಂತಿಯನ್ನು ಬಹಿಷ್ಕರಿಸಲಾಗುವುದು ಎಂದು ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ದ್ಯಾವಪ್ಪ ನಾಯಕ ಎಚ್ಚರಿಸಿದರು.

ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ವಾಲ್ಮೀಕಿ ಶ್ರೀಗಳು ನಡೆಸುತ್ತಿರುವ ಧರಣಿ 225ನೇ ದಿನವನ್ನು ಪೂರೈಸಿದೆ. ಮೀಸಲಾತಿ ಹೆಚ್ಚಳದ ಭರವಸೆ ನೀಡಿದ್ದ ಮುಖ್ಯಮಂತ್ರಿ ಈ ಕುರಿತು ಯಾವುದೇ ಕ್ರಮ ವಹಿಸಿಲ್ಲ. ಹೀಗಾಗಿ ಸರ್ಕಾರಕ್ಕೆ ಸೆ.28ರವರೆಗೆ ಗಡುವು ನೀಡಲಾಗುತ್ತಿದೆ. ನಂತರ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ವೇದಿಕೆ ಪದಾಧಿಕಾರಿಗಳಾದ ಪ್ರಭಾಕರ್ ಹುಣಸೂರು, ಚನ್ನನಾಯಕ, ಮಂಜುನಾಥ್, ರೇಲ್ವೆ ಸಿದ್ದಯ್ಯ, ಪ್ರಕಾಶ್ ಹಾಗೂ ರಘು ಯಡಕೊಳ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net