ಗ್ರಾಮೀಣರಿಗೆ ಹೆಚ್ಚಿನ ನೆರವು ನೀಡಲಿ

NYK VITHARANE 13
Published on

ನಾಯಕನಹಟ್ಟಿ: ಕರೊನಾದಿಂದ ಸಂಕಷ್ಟಕ್ಕೆ ಒಳಗಾಗಿರುವ ಗ್ರಾಮೀಣರಿಗೆ ಸರ್ಕಾರ ಹೆಚ್ಚಿನ ನೆರವು ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯೆ ಜಯಮ್ಮ ಬಾಲರಾಜ್ ಹೇಳಿದರು.

ಪಟ್ಟಣದ ಸಮೀಪದ ತಿಮ್ಮಪ್ಪಯ್ಯನಹಳ್ಳಿಯಲ್ಲಿ ಅಶಕ್ತ ಮಹಿಳೆಯರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಲಾಕ್‌ಡೌನ್‌ನಿಂದ ಕೂಲಿ ಕೆಲಸ ದೊರೆಯದಂತಾಗಿದೆ. ನಗರ ಹಾಗೂ ಪಟ್ಟಣಗಳಿಂದ ಬಂದಿರುವ ಜನರು ಉದ್ಯೋಗ ಕಳೆದುಕೊಂಡಿದ್ದಾರೆ. ಅಶಕ್ತ ಮಹಿಳೆಯರು, ವೃದ್ಧರು ಸೇರಿ ನಾನಾ ಜನರು ಕಳೆದ 50 ದಿನಗಳಿಂದ ಹೆಚ್ಚಿನ ತೊಂದರೆಗೊಳಗಾಗಿದ್ದಾರೆ ಎಂದರು.

ಹದ ಮಳೆಯಾದರೂ ಕೃಷಿ ಚಟುವಟಿಕೆ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಕೈಯಲ್ಲಿ ಹಣವಿಲ್ಲ. ರೈತರು ಬಿತ್ತನೆ ಬೀಜ, ಗೊಬ್ಬರ ಕೊಳ್ಳಲು ಪರದಾಡುವಂತಾಗಿದೆ. ಹೀಗಾಗಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ, ಗೊಬ್ಬರ ನೀಡಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರ ಎಲ್ಲ ತಳ ಸಮುದಾಯಗಳಿಗೆ ಸಹಾಯಧನ ವಿತರಿಸಬೇಕು ಎಂದು ಆಗ್ರಹಿಸಿದರು.

ಗ್ರಾಪಂ ಅಧ್ಯಕ್ಷೆ ರತ್ನಮ್ಮ, ಬಾಲರಾಜ್, ಬಸವರಾಜ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net