ಪೇಟೆ ಜನರಿಗೆ ಹಳ್ಳಿಯಲ್ಲಿ ಕೆಲಸ

NYK CEO VISIT 08
Published on

ನಾಯಕನಹಟ್ಟಿ: ಗ್ರಾಮೀಣ ಜನರಿಗೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ನೀಡುವ ಮೂಲಕ ಜನರ ಕಷ್ಟಗಳನ್ನು ದೂರ ಮಾಡುವ ಪ್ರಯತ್ನ ಮಾಡಲಾಗುವುದು ಎಂದು ಜಿಪಂ ಸಿಇಒ ಎಸ್.ಹೊನ್ನಾಂಬ ಹೇಳಿದರು.

ಸಮೀಪದ ಮನುಮೈನಹಟ್ಟಿ ಕೆರೆಗೆ ಬುಧವಾರ ಭೇಟಿ ನೀಡಿ ಖಾತ್ರಿ ಕಾಮಗಾರಿ ಪರಿಶೀಲಿಸಿ ಮಾತನಾಡಿ, ಕೋವಿಡ್-19ರ ಪರಿಣಾಮದಿಂದ ಬೆಂಗಳೂರಿನಿಂದ ಸಾಕಷ್ಟು ಜನರು ಹಳ್ಳಿಗಳಿಗೆ ವಾಪಸಾಗಿದ್ದಾರೆ. ಅವರಿಗೆ ಉದ್ಯೋಗ ನೀಡುವ ಸಲುವಾಗಿ ಪಟ್ಟಿ ಸಿದ್ಧಪಡಿಸಿ ಅವರಿಗೂ ಜಾಬ್‌ಕಾರ್ಡ್ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದರು.

ಜಿಪಂ ಉಪ ಕಾರ್ಯದರ್ಶಿ ಡಾ.ಎಸ್.ರಂಗಸ್ವಾಮಿ, ತಾಪಂ ಇಒ ಡಾ.ಶ್ರೀಧರ ಐ.ಬಾರಿಕೇರ, ಪಿಡಿಒ ಎಸ್.ರಾಘವೇಂದ್ರ, ತಾಂತ್ರಿಕ ಸಂಯೋಜಕರಾದ ಮಂಜುನಾಥ್, ಜಿ.ಮೋನಿಕಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net