

ನಾಯಕನಹಟ್ಟಿ: ಐತಿಹಾಸಿಕ ದೊಡ್ಡಕೆರೆಯಲ್ಲಿ ಇದ್ದಿಲು ಸುಡುವ ವೃತ್ತಿ ನಿರ್ವಹಿಸುತ್ತಿರುವ ಮಹಾರಾಷ್ಟ್ರ ಮೂಲದ ಕಾರ್ಮಿಕರ ಆರೋಗ್ಯ ತಪಾಸಣೆಯನ್ನು ಶುಕ್ರವಾರ ನಡೆಸಲಾಯಿತು.
ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ವಿಕಾಸ್ ಮಾತನಾಡಿ, 60 ಪುರುಷರು, 39 ಮಹಿಳೆಯರು, 50 ಮಕ್ಕಳ ಸ್ಕ್ರೀನಿಂಗ್ ತಪಾಸಣೆ ನಡೆಸಲಾಗಿದ್ದು, ಯಾರಲ್ಲೂ ಜ್ವರದ ಲಕ್ಷಣ ಕಂಡು ಬಂದಿಲ್ಲ. ಸಾಮಾನ್ಯ ರೋಗಗಳಿಗೆ ಔಷಧ ನೀಡಲಾಗಿದ್ದು, ಇವರ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗಿದೆ ಎಂದು ತಿಳಿಸಿದರು.
ಪಪಂ ಮುಖ್ಯಾಧಿಕಾರಿ ಡಿ.ಭೂತಪ್ಪ ಮಾತನಾಡಿ, ಕರೊನಾ ವೈರಸ್ ತಡೆಗಾಗಿ ಹೊರ ರಾಜ್ಯ, ಜಿಲ್ಲೆಗಳಿಂದ ಬರುವ ನಾಗರಿಕರ ಆರೋಗ್ಯ ತಪಾಸಣೆ ನಡೆಸುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಕಂದಾಯ ನಿರೀಕ್ಷಕ ಚೇತನ್, ಶಿವಕುಮಾರ್, ಪಿಡಿಒ ವೀರನಾಯಕ, ಗ್ರಾಮ ಲೆಕ್ಕಾಧಿಕಾರಿ ಮಂಜುನಾಥ್, ಸುರೇಶ್, ಎಂ. ಶೇಷಾದ್ರಿನಾಯಕ, ಆರೋಗ್ಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರಿದ್ದರು.