ಕ್ಷೇತ್ರದ ಅಭಿವೃದ್ಧಿಗೆ 200 ಕೋಟಿ ರೂ.

NYK RAMULU 22
Published on

ನಾಯಕನಹಟ್ಟಿ: ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹಲವು ಯೋಜನೆಯಲ್ಲಿ 200 ಕೋಟಿ ರೂ. ವೆಚ್ಚದ ಅನುದಾನ ಒದಗಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು.

ಪಟ್ಟಣ ಪಂಚಾಯಿತಿ ಕಚೇರಿ ನಿರ್ಮಾಣಕ್ಕೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಅಪ್ಪರ್ ಭದ್ರಾ ಯೋಜನೆಯಡಿಯಲ್ಲಿ ಕ್ಷೇತ್ರದ 74 ಕೆರೆಗಳಿಗೆ ನೀರು ತುಂಬಿಸಲು 600 ಕೋಟಿ ರೂ. ವೆಚ್ಚದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದರು.

ಎಸ್‌ಸಿಪಿ, ಟಿಎಸ್‌ಪಿ ಯೋಜನೆಯಡಿ ಕ್ಷೇತ್ರದ ಬಹುತೇಕ ಗ್ರಾಮಗಳಲ್ಲಿ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಲು 200 ಕೋಟಿ ರೂ. ಒದಗಿಸಲಾಗಿದೆ. 100 ದೇವಾಲಯಗಳಿಗೆ ಅನುದಾನ ನೀಡಲಾಗಿದೆ ಎಂದಯ ತಿಳಿಸಿದರು.

ಇದೇ ವೇಳೆ 1.05 ಕೋಟಿ ರೂ. ವೆಚ್ಚದ 50 ಲಕ್ಷ ರೂ. ವೆಚ್ಚದ ಬಾಬು ಜಗಜೀವನರಾಮ್ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.

ಪಪಂ ಸದಸ್ಯರಾದ ಜೆ.ಟಿ.ಎಸ್.ತಿಪ್ಪೇಸ್ವಾಮಿ, ಕೆ.ಎನ್.ಮಹಾಂತಣ್ಣ, ಎಸ್.ಉಮಾಪತಿ, ಬಿಜೆಪಿ ಮಂಡಲ ಅಧ್ಯಕ್ಷ ರಾಮರೆಡ್ಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯ, ಮೋಹನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net