ನಾಯಕನಹಟ್ಟಿ ಮಸೀದಿಯಲ್ಲಿ ಜಾಗೃತಿ

NYK MUSLIM 20
Published on

ನಾಯಕನಹಟ್ಟಿ: ವಿಶ್ವದಾದ್ಯಂತ ಕರೊನಾ ವೈರಸ್ ಹರಡಿರುವ ಹಿನ್ನೆಲೆಯಲ್ಲಿ ವಿದೇಶಗಳಿಂದ ಬರುವ ವ್ಯಕ್ತಿಗಳ ಬಗ್ಗೆ ಸ್ಥಳೀಯ ಆಡಳಿತ, ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ ರೋಗ ತಡೆಗಟ್ಟಲು ಸಹಕರಿಸಬೇಕು ಎಂದು ಮುಖ್ಯಾಧಿಕಾರಿ ಡಿ.ಭೂತಪ್ಪ ಹೇಳಿದರು.

ಪಟ್ಟಣದ ಜಾಮಿಯಾ ಮಸೀದಿಗೆ ಶುಕ್ರವಾರ ಭೇಟಿ ನೀಡಿ ಮಾತನಾಡಿ, ಕರೊನಾ ವೈರಸ್ ಹರಡಿರುವ ಹಿನ್ನೆಲೆಯಲ್ಲಿ ನಾವೆಲ್ಲ ಅತೀ ಜಾಗರೂಕತೆಯಿಂದ ಇರುವುದರ ಜತೆಗೆ ರೋಗವು ಹರಡದಂತೆ ಕಟ್ಟೆಚ್ಚರ ವಹಿಸಬೇಕಾಗಿದೆ. ಅದಕ್ಕಾಗಿ ಪಟ್ಟಣದ ಮುಸ್ಲಿಮರು ಯಾರಾದರೂ ವಿದೇಶದಿಂದ ಮರಳಿ ಬರುವವರಿದ್ದರೆ ತಕ್ಷಣವೇ ನಮಗೆ ಮಾಹಿತಿ ನೀಡಬೇಕು ಎಂದರು.

ಪಪಂ ಪೌರಕಾರ್ಮಿಕರು, ಸಿಬ್ಬಂದಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net