ನಾಯಕನಹಟ್ಟಿ: ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪಟ್ಟಣದ ವಿದ್ಯಾವಿಕಾಸ್ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಮೊಹಮದ್ ಫರಹಾನ್ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಪ್ರೌಢಶಾಲೆ ವಿದ್ಯಾರ್ಥಿನಿ ವಿ.ಸಹನಾ ರಂಗೋಲಿ ಸ್ಪರ್ಧೇಯಲ್ಲಿ ತೃತೀಯ ಸ್ಥಾನ ಪಡೆದಿದ್ದಾಳೆ ಎಂದು ಪ್ರಕಟಣೆ ತಿಳಿಸಿದೆ.