ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ

NYK SSLCE 03
Published on

ನಾಯಕನಹಟ್ಟಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ತಾಲೂಕಿನಲ್ಲಿನ ಎಲ್ಲ ಪರೀಕ್ಷಾ ಕೇಂದ್ರಗಳ ಪರಿಶೀಲನೆ ನಡೆಸಿ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಲು ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್ ಹೇಳಿದರು.

ಹೋಬಳಿಯ ತಿಮ್ಮಪ್ಪಯ್ಯನಹಳ್ಳಿ, ಅಬ್ಬೇನಹಳ್ಳಿ, ನಾಯಕನಹಟ್ಟಿಯ ಪರೀಕ್ಷಾ ಕೇಂದ್ರಗಳಿಗೆ ಬುಧವಾರ ಭೇಟಿ ನೀಡಿ ಮಾತನಾಡಿ, ಆರೋಗ್ಯ ದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ವಿವರಿಸಲಾಗಿದೆ ಎಂದು ಹೇಳಿದರು.

ಭಯಪಡದೇ ವಿಷಯಗಳನ್ನು ಪುನರ್ ಮನನ ಮಾಡಿಕೊಳ್ಳಿ, ಸಂದೇಹಗಳಿದ್ದಲ್ಲಿ ಶಿಕ್ಷಕರಲ್ಲಿ ಕೇಳಿ ಪರಿಹರಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಕ್ಷೇತ್ರ ಸಮನ್ವಯಾಧಿಕಾರಿ ಮಂಜಣ್ಣ, ವಿವಿಧ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರಾದ ಡಿ.ಎಸ್.ಪಾಲಯ್ಯ, ಸೋಮನಾಥ್, ಮೂರ್ತ್ಯಪ್ಪ, ಶ್ರೀನಿವಾಸ್, ಎಸ್‌ಟಿಎಸ್‌ಆರ್ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಬಿ.ಆರ್.ರಮೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net