ಡೆಂಗ್ಯೂ ಜಾಗೃತಿ ಮೂಡಿಸಿದ ಎನ್‌ಸಿಸಿ ಕೆಡೆಟ್ಸ್

jaatha
Published on

ಮಡಿಕೇರಿ: ನಗರದ ಕೊಡಗು ವಿದ್ಯಾಲಯದ ಎನ್‌ಸಿಸಿ ಕೆಡೆಟ್ಸ್‌ಗಳು ಕಾರ್ಗಿಲ್ ವಿಜಯ ದಿವಸವನ್ನು ನಾಗರೀಕರಿಗೆ ಡೆಂಗ್ಯೂ ಜಾಗೃತಿ ಕಾರ್ಯಕ್ರಮ ನೀಡುವುದರೊಂದಿಗೆ ಆಚರಿಸಿದರು.


ಕೊಡಗು ವಿದ್ಯಾಲಯದ ೧೯ನೇ ಕರ್ನಾಟಕ ಬೆಟಾಲಿಯನ್‌ನ ಎನ್‌ಸಿಸಿ ಕೆಡೆಟ್ಸ್‌ಗಳು ರಾಜರಾಜೇಶ್ವರಿ ಬಡಾವಣೆಯಲ್ಲಿರುವ ಮನೆಗಳಿಗೆ ಹೋಗಿ ಜನರಿಗೆ ಕಾರ್ಗಿಲ್ ವಿಜಯ ದಿನದ ಮಹತ್ವವನ್ನು ತಿಳಿ ಹೇಳುವುದರೊಂದಿಗೆ ಡೆಂಗ್ಯೂ ರೋಗದ ಲಕ್ಷಣಗಳು ಹಾಗೂ ಅಗನ್ನು ಹೇಗೆ ತಡೆಗಟ್ಟಬಹುದು ಎಂಬುದರ ಬಗ್ಗೆ ಜಾಗೃತಿ ಮಾಹಿತಿ ನೀಡಿದರು.


ಕಾರ್ಯಾಕ್ರಮಕ್ಕೆ ಶಾಲೆಯ ಪ್ರಾಂಶುಪಾಲೆ ಕೆ.ಎಸ್.ಸುಮಿತ್ರ, ಆಡಳಿತ ವ್ಯವಸ್ಥಾಪಕ ಪಿ.ರವಿ, ಮೇಜರ್ ದಾಮೋದರ್ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಎನ್‌ಸಿಸಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net